NEWSನಮ್ಮಜಿಲ್ಲೆಬೆಂಗಳೂರು

ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಾಗಿ “ಆಶಾಕಿರಣ ದೃಷ್ಟಿ ಕೇಂದ್ರ” ಉದ್ಘಾಟಿಸಿದ ಡಿಸಿಎಂ ಡಿಕೆಶಿ, ಸಚಿವ ದಿನೇಶ್ ಗುಂಡೂರಾವ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ ಹಾಗೂ ಸೈಟ್ ಸೇವರ್ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ “ಆಶಾಕಿರಣ ದೃಷ್ಟಿ ಕೇಂದ್ರ” ವನ್ನು ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಇಂದು ಗೋವಿಂದರಾಜನಗರ ಎಂ.ಸಿ. ಲೇಔಟ್‌ನಲ್ಲಿರುವ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಳಿಕ ಮಾತನಾಡಿದ ಡಿಸಿಎಂ ಶಿವಕುಮಾರ್‌, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಆಶಾಕಿರಣ ದೃಷ್ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಇದರಲ್ಲಿ 5 ಕೇಂದ್ರಗಳು ಸಿ.ಎಸ್.ಆರ್ ಸಂಸ್ಥೆಯ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕ ವಿತರಣೆಗಳ ಸೇವೆಗಳನ್ನು ನೀಡಲು ಒಪ್ಪಿದ್ದಾರೆ ಎಂದರು.

ಅಶಾಕಿರಣ ಕಾರ್ಯಕ್ರಮ ಸಿ.ಎಸ್.ಆರ್ ಸಂಸ್ಥೆ ಅವರ ಸಹಯೋಗದೊಂದಿಗೆ – ಆಶಾಕಿರಣ ಕಾರ್ಯಕ್ರಮದಡಿಯಲ್ಲಿ, ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿ.ಎಸ್.ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಮಾಡಲಾಗಿದೆ. ಈ ಕೇಂದ್ರಗಳು ನಮ್ಮ ಆರೋಗ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 393 ನಿಗದಿತ ಅಶಾಕಿರಣ ದೃಷ್ಟಿ ಕೇಂದ್ರಗಳ ಭಾಗವಾಗಿವೆ ಎಂದು ತಿಳಿಸಿದರು.

ಸಿ.ಎಸ್.ಆರ್ ಪ್ರಾಯೋಜಿತ ಕೇಂದ್ರಗಳು ಮಾನವ ಸಂಪತ್ತು, ಉಪಕರಣಗಳು ಮತ್ತು ಉಚಿತ ಕನ್ನಡಕಗಳನ್ನು ಒದಗಿಸಲಾಗುತ್ತಿದೆ. ಅಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಮೂಲಸೌಕರ್ಯ ಮತ್ತು ಸಂಪನ್ಮೂಲಗಳನ್ನು ವೃದ್ಧಿಸುವ ಮೂಲಕ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಯನ್ನು ಒದಗಿಸಲಾಗುತ್ತಿದೆ ಎಂದರು.

ಇನ್ನು ಕರ್ನಾಟಕ ಸರ್ಕಾರದ ಆಶಾಕಿರಣ ಯೋಜನೆಯು ದೃಷ್ಟಿ ಸಮಸ್ಯೆಗಳ ವಿರುದ್ಧದ ಹೋರಾಟದಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಿರುವ, ಶಾಶ್ವತ ಆಶಾಕಿರಣ ದೃಷ್ಠಿ ಕೇಂದ್ರಗಳ ಮೂಲಕ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ದೃಷ್ಟಿ ದೋಷವಿರುವವರಿಗೆ ಉಚಿತ ಕನ್ನಡಕ ವಿತರಣೆ ಹಾಗೂ ಕಣ್ಣಿನ ಸೇವೆಗಳನ್ನು ನೀಡುವುದಾಗಿದೆ ಎಂದು ವಿವರಿಸಿದರು.

ಬಿಬಿಎಂಪಿ‌ ವ್ಯಾಪ್ತಿಯಲ್ಲಿ 11 ಆಶಾಕಿರಣ ದೃಷ್ಟಿ ಕೇಂದ್ರಗಳ ವಿವರ: * ಜೆ.ಜೆ.ಆರ್ ನಗರ ಸಾರ್ವಜನಿಕ ಆಸ್ಪತ್ರೆ * ಹಲಸೂರು ಹೆರಿಗೆ ಆಸ್ಪತ್ರೆ * ಹೆಚ್. ಸಿದ್ದಯ್ಯ ರಸ್ತೆ ಹೆರಿಗೆ ಆಸ್ಪತ್ರೆ * ಹೊಸಹಳ್ಳಿ ಹೆರಿಗೆ ಆಸ್ಪತ್ರೆ * ಆರ್.ಸಿ ಪುರ ಹೆರಿಗೆ ಆಸ್ಪತ್ರೆ * ಬನಶಂಕರಿ ಹೆರಿಗೆ ಆಸ್ಪತ್ರೆ * ಗೌರಿ ಪಾಳ್ಯ ಹೆರಿಗೆ ಆಸ್ಪತ್ರೆ * ರಾಂಪುರ ಆಸ್ಪತ್ರೆ * ಇಂದಿರಾನಗರ ಸಾರ್ವಜನಿಕ ಆಸ್ಪತ್ರೆ * ಜಯನಗರ ಸಾರ್ವಜನಿಕ ಆಸ್ಪತ್ರೆ * ಕೆಸಿ ಜನರಲ್ ಆಸ್ಪತ್ರೆ, ಮಲ್ಲೇಶ್ವರಂ

ಸಮಾರಂಭದಲ್ಲಿ ಸ್ಥಳೀಯ ಶಾಸಕ ಪ್ರಿಯಾಕೃಷ್ಣ, ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಅವಿನಾಶ್ ಮೆಮನ್ ರಾಜೇಂದ್ರನ್, ವಲಯ ಜಂಟಿ ಆಯುಕ್ತ ಸಂಗಪ್ಪ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!