ಬೆಳಗಾವಿ: ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದ ನಮ್ಮೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಭೇಟಿಯಾಗಿ ಮಕ್ಕಳೊಂದಿಗೆ ಶಾಲಾ ಚಟುವಟಿಕೆಗಳು, ಶಿಕ್ಷಣ ಮತ್ತು ಅವರ ಭವಿಷ್ಯದ ಆಕಾಂಕ್ಷೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿಂದು ಸಂವಾದ ನಡೆಸಿದರು.

ಈ ಮಕ್ಕಳು ನಮ್ಮ ನಾಳಿನ ನಾಯಕರು ಮತ್ತು ದೇಶದ ಭವಿಷ್ಯದ ರೂವಾರಿಗಳು. ಎಲ್ಲ ಮಕ್ಕಳೂ ತಮ್ಮ ಗುರಿಗಳನ್ನು ಮುಟ್ಟಿ, ಜೀವನದಲ್ಲಿ ಯಶಸ್ಸನ್ನು ಸಾಧಿಸಲಿ ಎಂದು ಹೃತ್ಪೂರ್ವಕವಾಗಿ ಹಾರೈಸಿದ್ದೇನೆ ಎಂದು ತಿಳಿಸಿದರು.
ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು ಹಾಕುತ್ತಿದ್ದಾರೆ ಆದರೆ, ನಾವು ಯೋಜನೆ ಪೂರ್ಣಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಈ ಯೋಜನೆ ಪೂರ್ಣಗೊಳಿಸಲು ನಾವು ಬದ್ಧವಾಗಿದ್ದೇವೆ. ವರ್ಷಕ್ಕೆ 15-20 ಸಾವಿರ ಕೋಟಿ ರೂ. ನೀಡಬೇಕು, ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ಹೊರಟಿದ್ದೇವೆ. ಕೆಲವು ಕಡೆ ಕೆಲಸವನ್ನೂ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ (ಹಂತ-3) ಸಂಬಂಧ ಭೂಸ್ವಾಧೀನ ಪರಿಹಾರ ಸೇರಿದಂತೆ ಇತರೇ ವಿಚಾರಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರ ಪ್ರಶ್ನೆಗೆ ಈ ಉತ್ತರವನ್ನು ಡಿಸಿಎಂ ಕೊಟ್ಟರು.
ವಿಶೇಷ ವಿಮಾನದ ಸೇವೆ: ಇನ್ನು ರಾಜ್ಯಪಾಲರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರ್ಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯುವ ಸಂಬಂಧ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಿ ಸಮಾಲೋಚಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜದ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಇನ್ನಿತರ ಇದ್ದರು.
Related










