NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ 4ನಿಗಮಗಳ ಡಿಸಿಗಳು ತಿಂಗಳಿಗೊಮ್ಮೆ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ವರದಿ ನೀಡಬೇಕು: ಸಚಿವ ರಾಮಲಿಂಗಾರೆಡ್ಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ
  •  ಬಸ್ ನಿಲ್ದಾಣಗಳ ಸ್ವಚ್ಛತೆ ಬಗ್ಗೆ  ಉಪ ಲೋಕಾಯುಕ್ತರು ಸಹ  ಅನೇಕ ಬಾರಿ ನಿಲ್ದಾಣಗಳಿಗೆ ಭೇಟಿ ನೀಡಿ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ 
  • ಅಶುಚಿಯ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ- ಸಾರಿಗೆ ಸಚಿವರು 

ಬೆಂಗಳೂರು: ಕರ್ನಾಟಕ ರಾಜ್ಯದ ಸಾರಿಗೆ ಸಂಸ್ಥೆಯ 4 ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಂಗಳಿಗೆ ಒಮ್ಮೆ ಖುದ್ದಾಗಿ ತಮ್ಮ ವ್ಯಾಪ್ತಿಯ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ನಿಲ್ದಾಣಗಳು ಹಾಗೂ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿರುವ ಬಗ್ಗೆ ವರದಿ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಯಾಯ ನಿಗಮಗಳ ವ್ಯಾಪ್ತಿಗೊಳಪಡುವ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಂಗಳಿಗೆ ಒಮ್ಮೆ ಖುದ್ದಾಗಿ ನಿಲ್ದಾಣಗಳಿಗೆ ಭೇಟಿ ನೀಡಿ ನಿಲ್ದಾಣಗಳನ್ನು ಹಾಗೂ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿರುವ ಬಗ್ಗೆ ವರದಿ ನೀಡಬೇಕು ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.‌

ಇನ್ನು ಕರ್ನಾಟಕ ರಾಜ್ಯದ ಸಾರಿಗೆ ಸಂಸ್ಥೆಯ 4 ನಿಗಮಗಳಿಂದ ಪ್ರತಿನಿತ್ಯ ಅಂದಾಜು 1.15 ಕೋಟಿ ಪ್ರಯಾಣಿಕರಿಗೆ ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿರುವ ಸೇವೆ ದೇಶದಲ್ಲಿಯೇ ಹೆಗ್ಗಳಿಕೆ ಪಡೆದಿದೆ. ಆದರೆ, ನಿಗಮಗಳ ವ್ಯಾಪ್ತಿಯಲ್ಲಿರುವ ಅನೇಕ ಬಸ್ ನಿಲ್ದಾಣಗಳಲ್ಲಿ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದೆ ಇರುವ ಬಗ್ಗೆ ಹಾಗೂ ಅಶುಚಿಯ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ.

ಅಲ್ಲದೆ, ಉಪ ಲೋಕಾಯುಕ್ತರು ಸಹ ಈ ಬಗ್ಗೆ ಅನೇಕ ಬಾರಿ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಸ್ವಯಂ ದೂರನ್ನು ದಾಖಲಿಸಿಕೊಂಡು ಮಾಹಿತಿಯನ್ನು ನಮ್ಮ ಕಚೇರಿಗೆ ನೀಡಿದ್ದಾರೆ. ಆದ್ದರಿಂದ, ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಯಾಯ ನಿಗಮಗಳ ವ್ಯಾಪ್ತಿಗೊಳಪಡುವ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಂಗಳಿಗೆ ಒಮ್ಮೆ ಖುದ್ದಾಗಿ ನಿಲ್ದಾಣಗಳಿಗೆ ಭೇಟಿ ನೀಡಬೇಕು.

ಇನ್ನು ತಮ್ಮ ವ್ಯಾಪ್ತಿಗೆ ಒಳಪಡುವ ನಿಲ್ದಾಣಗಳು ಹಾಗೂ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿರುವ ಬಗ್ಗೆ ವರದಿಯನ್ನು ತಮಗೆ ಸಲ್ಲಿಸುವಂತೆ ಸೂಕ್ತ ಆದೇಶವನ್ನು ಹೊರಡಿಸಲು ಸೂಚಿಸಿದೆ ಹಾಗೂ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.

Megha
the authorMegha

Leave a Reply

error: Content is protected !!