NEWSನಮ್ಮರಾಜ್ಯರಾಜಕೀಯ

ವಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಮೃತ: ತಲಾ 5 ಲಕ್ಷ ರೂ. ಪರಿಹಾರ ಘೊಷಿಸಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಳ್ಳಾರಿಯ ವಿಮ್ಸ್‌ನ ಐಸಿಯುನಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದಿಂದ ಮೂವರು ರೋಗಿಗಳು ಮೃತಪಟ್ಟಿದ್ದು, ವಿಧಾನಸಭೆ ಅಧಿವೇಶನದಲ್ಲೂ  ಈ ವಿಚಾರ ಸದ್ದು ಮಾಡಿತು. ವಿಪಕ್ಷ ನಾಯಕ ಸಿದ್ಧರಾಮಯ್ಯ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು.

ಈ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೃತ ಮೂವರು ರೋಗಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಇಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ಐಸಿಯು ನಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದರಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳು ಆಕ್ಸಿಜನ್ ಕೊರತೆಯಿಂದ ಅಸುನೀಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಪರಿಹಾರವನ್ನು ಘೋಷಿಸಿದೆ.

ಮತ್ತೊಂದೆಡೆ ವಿಮ್ಸ್​ ಆಸ್ಪತ್ರೆಯ ಐಸಿಯು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಚಿವ ಸುಧಾಕರ್‌ ಟ್ವಿಟ್ ಮಾಡಿದ್ದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರ, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ