NEWSನಮ್ಮರಾಜ್ಯರಾಜಕೀಯ

ನವೆಂಬರ್‌ನಲ್ಲಿ ರಾಜಕೀಯ ನಿಲುವು ಪ್ರಕಟ : ಮಾಜಿ ಸಚಿವ ಜಿಟಿಡಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕ್ಷೇತ್ರದ ಜನರು, ಹಿತೈಷಿಗಳು, ಬೆಂಬಲಿಗರ ಸಲಹೆ ಪಡೆದು ನವೆಂಬರ್‌ನಲ್ಲಿ ನನ್ನ ಮುಂದಿನ ರಾಜಕೀಯ ನಿಲುವು ಮತ್ತು ಪಕ್ಷ ರಾಜಕಾರಣದ ಬಗ್ಗೆ ಪ್ರಕಟಿಸುತ್ತೇನೆ ಎಂದು ಜೇಡಿಎಸ್‌ ಮುಖಂಡ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಹುಣಸೂರಿನಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಶುಕ್ರವಾರ ವೇದಿಕೆ ಹಂಚಿಕೊಂಡಿದ್ದರು. ಈ ಮೊದಲು ಕಳೆದ ಹಲವಾರು ತಿಂಗಳುಗಳಿಂದ ಜೆಡಿಎಸ್‌ ಪಕ್ಷದ ನಾಯಕತ್ವದಿಂದ ಅಂತರ ಕಾಯ್ದುಕೊಂಡಿದ್ದರು.

ಬಳಿಕ ನಿನ್ನೆ ವೇದಿಕೆ ಹಂಚಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ನವೆಂಬರ್‌ನಲ್ಲಿ ಕುಳಿತು ಮಾತನಾಡೋಣ, ಹೀಗೇಕಾಯಿತು ಎಂದು ಚರ್ಚಿಸೋಣ ಎಂದು ಜೆಡಿಎಸ್‌ ವರಿಷ್ಠರಿಗೆ ಹೇಳಿದ್ದೇನೆ ಎಂದ ಅವರು, ನಿರ್ಮಲಾನಂದನಾಥ ಸ್ವಾಮೀಜಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದರು. ಇಬ್ಬರೂ ನನಗೆ ಆತ್ಮೀಯರು. ಎಲ್ಲರೂ ಗೌರವದಿಂದ ಮಾತನಾಡಿದರು ಎಂದು ತಿಳಿಸಿದರು.

ನಮ್ಮದೇನಿದ್ದರೂ ಜನರ ಪರವಾದ ರಾಜಕಾರಣ. ಹೀಗಾಗಿ ನನ್ನ ಮಗನಿಗೆ (ಜಿ.ಡಿ.ಹರೀಶ್‌ಗೌಡ) ಟಿಕೆಟ್‌ ನೀಡಿ, ಮಂತ್ರಿ ಮಾಡಿ ಎಂದು ಯಾರಲ್ಲೂ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಯಾರಿಗೂ ಶಿಫಾರಸು ಮಾಡುವುದಿಲ್ಲ. ಶಾಸಕ ಸಾ.ರಾ. ಮಹೇಶ್‌ ಎಲ್ಲವನ್ನೂ ನಿರ್ವಹಿಸುತ್ತೇನೆ ಎಂದಿದ್ದಾರೆ. ಅಂತೆಯೇ ಮುಂದುವರಿಯುತ್ತೇವೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅಥವಾ ಕುಮಾರಸ್ವಾಮಿ ಅವರೊಂದಿಗೆ ವೈಷಮ್ಯ ಇಲ್ಲ. ಸದ್ಯ ತಟಸ್ಥನಾಗಿದ್ದೇನೆ. ವರಿಷ್ಠರು ಕರೆದರೆ ಸ್ಪಂದಿಸುತ್ತೇನೆ. ಅವರ ವಿರುದ್ಧ ಆಪಾದನೆ ಮಾಡಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಯಾವ ಮುಖ್ಯಮಂತ್ರಿಗಳು ಅನುದಾನ ನೀಡಿದ್ದಾರೆಯೋ ಅವರ ಹೆಸರನ್ನು ಹೇಳುತ್ತೇನೆ, ನಾನೇ ಮಾಡಿದ್ದೇನೆ ಎಂದು ಹೇಳುತ್ತಿಲ್ಲ ಎಂದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ