Please assign a menu to the primary menu location under menu

NEWSದೇಶ-ವಿದೇಶರಾಜಕೀಯ

ED ನೋಟಿಸ್​​ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಡೋಂಟ್ ಕೇರ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲ: ಲಿಕ್ಕರ್ ಹಗರಣದ ಮನಿ ಲ್ಯಾಂಡರಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್​​ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಡೋಂಟ್ ಕೇರ್​ ಎಂದಿದ್ದಾರೆ.

ಇಡಿ ಅಧಿಕಾರಿಗಳು ಕೇಜ್ರಿವಾಲ್​ಗೆ ನೀಡುತ್ತಿರುವ 3ನೇ ನೋಟಿಸ್ ಇದಾಗಿದೆ. ಈ ಮೊದಲು ನವೆಂಬರ್ 2, ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ ಕೇಜ್ರಿವಾಲ್, ವಿಚಾರಣೆಗೆ ಹಾಜರಾಗಲಿಲ್ಲ. ಈಗ ಮತ್ತೆ ಇಡಿ ನೀಡಿದ್ದ ಮೂರನೇ ಸಮನ್ಸ್​​ಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಜರಾಗುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ ಸ್ಪಷ್ಟಪಡಿಸಿದೆ.

ಮೂರನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಅದರಂತೆ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಬೇಕಾಗಿತ್ತು. ಜಾರಿ ನಿರ್ದೇಶನಾಲಯದ ವಿರುದ್ಧ ವಾಗ್ದಾಳಿ ನಡೆಸಿರುವ ಆಪ್​, ಕೇಜ್ರಿವಾಲ್​ಗೆ ಕಾನೂನು ಬಾಹಿರವಾಗಿ ನೋಟಿಸ್ ನೀಡಿದ್ದಾರೆ. ಅವರನ್ನು ಬಂಧಿಸಲು ಪಿತೂರಿ ನಡೆಸಲಾಗಿದೆ ಎಂದು​ ಆರೋಪಿಸಿದೆ.

ಚುನಾವಣೆ ಹತ್ತಿರ ಇದ್ದಾಗ ಯಾಕೆ ನೋಟಿಸ್ ನೀಡಿದ್ದಾರೆ. ನೋಟಿಸ್​ನ ಉದ್ದೇಶ ಚುನಾವಣೆಯಲ್ಲಿ ಕೇಜ್ರಿವಾಲ್ ಪ್ರಚಾರ ಮಾಡೋದನ್ನು ನಿಲ್ಲಿಸುವುದಾಗಿದೆ. ಇದು ಬಿಜೆಪಿ ಮಾಡುತ್ತಿರುವ ಕಿತಾಪತಿ ಎಂದು ಆಪ್ ವಾಗ್ದಾಳಿ ನಡೆಸಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...