NEWSದೇಶ-ವಿದೇಶರಾಜಕೀಯ

ದೆಹಲಿ: ಮೇಯರ್‌, ಉಪಮೇಯರ್‌ ಚುನಾವಣೆ – ಬಿಜೆಪಿಯಿಂದಲೂ ಅಭ್ಯರ್ಥಿಗಳ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ಮಹಾನಗರ ಪಾಲಿಕೆಗೆ ಮೇಯರ್‌, ಉಪಮೇಯರ್‌ ಆಯ್ಕೆಗೆ ಜ.6ರಂದು ಚುನಾವಣೆ ನಡೆಯಲಿದ್ದು, ಆಮ್‌ ಆದ್ಮಿ ಪಕ್ಷ ಮೇಯರ್‌ ಹಾಗೂ ಉಪಮೇಯರ್‌ ಅಭ್ಯರ್ಥಿಗಳ ಹೆಸರು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಈ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಕುತೂಹಲ ಹೆಚ್ಚಿಸಿದೆ.

ಈ ಚುನಾವಣೆಯಲ್ಲಿ ಬಿಜೆಪಿಯ ರೇಖಾ ಗುಪ್ತಾ ಮತ್ತು ಕಮಲ್‌ ಬಾಗ್ಡಿ ಕ್ರಮವಾಗಿ ಮೇಯರ್‌ ಹಾಗೂ ಉಪಮೇಯರ್‌ ಅಭ್ಯರ್ಥಿಗಳಾಗಿದ್ದಾರೆ ಎಂದು ಮಂಗಳವಾರ ಇವರ ಹೆಸರನ್ನು ಘೋಷಣೆ ಮಾಡಿದೆ.

ಇನ್ನು ರೇಖಾ ಗುಪ್ತಾ, ಶಾಲಿಮಾರ್‌ ಬಾಗ್‌ನಿಂದ ಮೂರು ಬಾರಿ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡಿದ್ದರೆ, ಕಮಲ್‌ ಬಾಗ್ಡಿ ರಾಮ್‌ ನಗರ್‌ನಿಂದ ಮೊದಲ ಸಲ ಪಾಲಿಕೆ ಸದಸ್ಯರಾಗಿ ಚುನಾಯಿತರಾಗಿದ್ದಾರೆ.

ಇನ್ನು ಈಗಾಗಲೇ ಶೆಲ್ಲಿ ಒಬೆರಾಯ್‌ ಮೇಯರ್‌ ಮತ್ತು ಮಹಮ್ಮದ್‌ ಇಕ್ಬಾಲ್‌ ಉಪಮೇಯರ್‌ ಸ್ಥಾನದ ಅಭ್ಯರ್ಥಿಗಳು ಎಂದು ಎಎಪಿ ಘೋಷಣೆ ಮಾಡಿದೆ. ಶೆಲ್ಲಿ ಅವರು ಪೂರ್ವ ಪಟೇಲ್‌ ನಗರ ವಾರ್ಡ್‌ನಿಂದ ಮೊದಲ ಸಲ ಆಯ್ಕೆಯಾಗಿದ್ದು, ಇಕ್ಬಾಲ್‌, ಚಾಂದಿನಿ ಮಹಲ್‌ ವಾರ್ಡ್‌ನಿಂದ ಎರಡನೇ ಬಾರಿಗೆ ಸದಸ್ಯರಾಗಿದ್ದಾರೆ.

ಶೆಲ್ಲಿ ಒಬೆರಾಯ್‌ ಅತಿಥಿ ಉಪನ್ಯಾಸಕಿಯಾಗಿದ್ದರು. ಇನ್ನು ಎಎಪಿ ಶಾಸಕ ಶೋಯಬ್‌ ಇಕ್ಬಾಲ್‌ ಅವರ ಪುತ್ರ ಈ ಇಕ್ಬಾಲ್‌. ದೆಹಲಿ ಮೇಯರ್‌ ಹುದ್ದೆ 5 ವರ್ಷ ಅವಧಿಗೆ ಮಹಿಳೆಗೆ ಮೀಸಲಾಗಿದೆ. ಇನ್ನು ಸದಸ್ಯರಾಗಿ ಪಾಲಿಕೆ ಚುನಾಯಿತರಾಗಿರುವ 250 ಮಂದಿಯೂ ಜ.6ರಂದು ಪ್ರಮಾಣವಚನ ಸ್ವೀಕರಿಸಲಿದ್ದು ಅಂದೇ ಮೇಯರ್‌ ಆಯ್ಕೆ ಮಾಡಲಿದ್ದಾರೆ. ಅಂದು ಆಯ್ಕೆಯಾದವರು 2023ರ ಏಪ್ರಿಲ್‌ವರೆಗೆ ಮೇಯರ್‌ ಸ್ಥಾನದಲ್ಲಿರಲಿದ್ದಾರೆ. ಆದರೂ ಏಪ್ರಿಲ್‌ನಲ್ಲಿ ಮತ್ತೆ ಮೇಯರ್‌ ಆಯ್ಕೆ ನಡೆಯಲಿದೆ.

ಇದೇ ಡಿ.7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ 134 ಸ್ಥಾನ ಗೆದ್ದಿದ್ದು, ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿದೆ. ಇನ್ನು ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್‌ ಆಗಲಿದ್ದಾರೆ ಎಂಬ ವಿಶ್ವಾಸವನ್ನು ಬಿಜೆಪಿಯ ಕೆಲ ನಾಯಕರು ವ್ಯಕ್ತಪಡಿಸಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹೀಗಾಗಿ ಮೇಯರ್‌ ಆಯ್ಕೆ ಚುನಾವಣೆ ಬಹು ಕುತೂಹಲಕ್ಕೆ ಕಾರಣವಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ