NEWSಕೃಷಿನಮ್ಮರಾಜ್ಯ

ಕಬ್ಬಿನ ದರ ನಿಗದಿಗೆ ಆಗ್ರಹ: 3ನೇ ದಿನದ ಸರದಿ ಉಪವಾಸ ಸತ್ಯಾಗ್ರಹ ಯಶಸ್ವಿ- ನಾಳೆಯಿಂದ ನಿರಂತರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರ ರೈತರ ಆಹೋ ರಾತ್ರಿ ಧರಣಿ 37ನೇ ದಿನ ಪೂರೈಸಿದೆ‌. ಇತ್ತ ಅದೇ ಸ್ಥಳದಲ್ಲಿ ಕಳೆದ ಮೂರನೇ ದಿನದ ಸರದಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು ನಾಳೆಯಿಂದ (ಡಿ.29 ) ನಿರಂತರ ಉಪವಾಸ ಸತ್ಯಾಗ್ರಹ ಮಾಡುವ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ.

ನ್ಯಾಯ ಸಮ್ಮತ ಕಬ್ಬುದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮೂರು ದಿನದಿಂದ ಐದು ರೈತರಂತೆ ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಹೀಗಾಗಿ ಇಂದು ಬೆಳಗಿನಿಂದಲೇ ಆಹಾರ ತ್ಯಜಿಸಿ ಸಂಜೆ 6 ಗಂಟೆ ತನಕ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ್ ಬುಬಾಟಿ ಪರಶುರಾಮಡಂಗೆ, ರಾಜು ಧಾರವಾಡಕರ, ಉದಾಯ ಧಾರವಾಡಕರ, ಪರಶುರಾಮ ಮಂಜನ್ನವರ ಈ ಎಲ್ಲ ಹಳಿಯಾಳದ ರೈತರು ಸರದಿ ಉಪವಾಸ ಸತ್ಯಾಗ್ರಹ ಮಾಡಿದರು. ಉಳಿದ ರೈತರು ಹಾಗೂ ರಾಜ್ಯಾಧ್ಯಕ್ಷ ಕುರುಬೂರ್ ಶಾಂತ ಕುಮಾರ್ ಧರಣಿಯಲ್ಲಿ ಭಾಗವಹಿಸಿದರು.

ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್, ಕಳೆದ 14 ದಿನಗಳ ಹಿಂದೆ ಧರಣಿ ನಿರತ ರೈತ ಮುಖಂಡರ ಜತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿ ಕಬ್ಬಿನ ದರ ಏರಿಕೆ ಭರವಸೆ ನೀಡಿ, ಈ ತನಕ ಯಾವುದೇ ನಿರ್ಧಾರ ಪ್ರಕಟಿಸಿಲ್ಲ, ಬರಿ ಮಾತಿನ ಭರವಸೆ ಬೇಡ ನುಡಿದಂತೆ ನಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ರೈತರ ಹೋರಾಟವನ್ನು ಲಘುವಾಗಿ ಕಾಣಬಾರದು ವಚನಭ್ರಷ್ಟರಾಗಬಾರದು, ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಾಳೆಯಿಂದ ನಿರಂತರ ಉಪವಾಸ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳು ಕಬ್ಬು ದರ ಏರಿಕೆ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎನ್ನುವಂಥಾದರೆ ಬಹಿರಂಗವಾಗಿ ತಿಳಿಸಿ ಎಂದು ಒತ್ತಾಯಿಸಿದರು.

ಇನ್ನು ರಾತ್ರಿ ವೇಳೆಯಲ್ಲಿ ಮುಂಜಾಗ್ರತಾ ಕ್ರಮವೆಂದು ರೈತ ಮುಖಂಡರನ್ನು ಬಂಧಿಸುವುದು, ಚಳವಳಿಯನ್ನು ದಿಕ್ಕು ತಪ್ಪಿಸುವುದು. ಪೊಲೀಸ್ ಬಲದ ಮೂಲಕ ಹತ್ತಿಕುವುದು ಸರ್ಕಾರಕ್ಕೆ ಶೋಭೆತರುವುದಿಲ್ಲ. ಕಬ್ಬು ಬೆಳೆಗಾರ ರೈತರಿಗೆ ಯಾವುದೇ ಅಡಚಣೆ ಇಲ್ಲದೆ ಜಾಥಾ ನಡೆಸಲು ಅವಕಾಶ ನೀಡಲಿ, ನಮ್ಮ ಶಕ್ತಿ ತೋರುತ್ತೇವೆ, ಸದಾ ರೈತಪರ ಎನ್ನುವ ಈ ಸರ್ಕಾರ ರೈತರ ಕಣ್ಣಿಗೆ ಮಣ್ಣೆರೆಚಬಾರದು ಎಂದು ಎಚ್ಚರಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...