NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕ – ಆಂಧ್ರ ಗಡಿಯಲ್ಲಿ KSRTC ಬಸ್‌ ಸೇವೆ ಹೆಚ್ಚಿಸಲು ಪಬ್ಲಿಕ್‌ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸೆ ಸಾರಿಗೆ ನಿಗಮದ ಬಸ್‌ಗಳು ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದ ಹೆಚ್ಚಾಗಿ ಸಂಚರಿಸದಿರುವುದರಿಂದ ಗಡಿಯಲ್ಲಿರುವ ಮಂದಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳ ಸಾರಿಗೆ ಎಂಡಿಗಳು ಗಡಿಬಾಗಗಳಲ್ಲಿ ಬಸ್‌ಸೇವೆಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು  ಶ್ರೀಸಾಯಿ ಎಂಬುವರು ಮನವಿ ಮಾಡಿದ್ದಾರೆ.

ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಿಂದ – ಯಲಹಂಕ – ಚಿಂತಾಮಣಿ – ಮದನಪಲ್ಲಿ – ಪೈಲರ್ – ತಿರುಪತಿ ಮಾರ್ಗವಾಗಿ ಕಡಪ – ಮದನಪಲ್ಲಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಯಮಿತ ಸೇವೆ ತೀರಾ ಕಡಿಮೆಯಿದೆ. ಹೀಗಾಗಿ ಈ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳಿಂದ ಪ್ರಯಾಣಿಕರು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಬೆಂಗಳೂರಿನಿಂದ – ಚಿಕ್ಕಬಳ್ಳಾಪುರ ವಿಭಾಗದ ಚಿಂತಾಮಣಿ – ಮದನಪಲ್ಲಿ ಪೈಲರ್ ತಿರುಪತಿ ಮಾರ್ಗವಾಗಿ ಕಡಪ ಮದನಪಲ್ಲಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಗಳಾಗಿದ್ದು ಈ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಭಾರಿ ಬೇಡಿಕೆ ಇದೆ.

ಈ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳು ಇವೆ. ಆದರೆ, ಬೆಂಗಳೂರಿನಿಂದ ಕಡಪ – ಮದನಪಲ್ಲಿಗೆ ಸಂಚರಿಸಬೇಕಿರುವ ಸಾರ್ವಜನಿಕರಿಗೆ ಹೊರೆಯಾಗುವಂತಹ ಪ್ರಯಾಣ ದರ ವಿಧಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಹೆಚ್ಚು ಹಣ ಕೊಟ್ಟು ಪ್ರಯಾಣಿಸುವ ಸ್ಥಿತಿ ಬಂದಿದೆ.

ಹೀಗಾಗಿ ಚಿಂತಾಮಣಿ ಸಾರಿಗೆ ಘಟಕದಿಂದ ಅಂತಾರಾಜ್ಯ ಮಾರ್ಗಗಳಿಗೆ ಯಲಹಂಕ – ಚಿಂತಾಮಣಿ – ಮದನಪಲ್ಲಿ – ಪೈಲರ್ ತಿರುಪತಿ ಮಾರ್ಗವಾಗಿ, ಬೆಂಗಳೂರಿನಿಂದ ಕಡಪ – ಮದನಪಲ್ಲಿ – ತಿರುಪತಿಗೆ ಕೆಎಸ್ಆರ್ಟಿಸಿ ಬಸ್ ಸಂಖ್ಯೆಗಳನ್ನು ಹೆಚ್ಚಿಸಬೇಕು. ಇದರಿಂದ ಈ ಮಾರ್ಗವಾಗಿ ಪ್ರಯಾಣಿಸುವ ಸಾರ್ವಜನಿಕರಿಗೂ ಅನುಕೂಲವಾಗಲಿದ್ದು, ಖಾಸಗಿ ಬಸ್‌ಗಳಲ್ಲಿ ನಡೆಯುತ್ತಿರುವ ಸುಲಿಗೆಯನ್ನು ತಪ್ಪಿಸಬಹುದಾಗಿದೆ.

ವಾರದ ಕೊನೆ ಮತ್ತು ಹಬ್ಬ ಹರಿದಿನಗಳೂ ಸೇರಿದಂತೆ ಸಾಮಾನ್ಯ ದಿನಗಳಲ್ಲೂ ಬಸ್‌ ಸೇವೆ ಒದಗಿಸುವ ಮೂಲಕ ಅಂತಾರಾಜ್ಯ ಕೆಎಸ್‌ಆರ್‌ಟಿಸಿ ನಿಯಮಿತ ಸೇವಾ ಸಮಸ್ಯೆಗಳನ್ನು ಪರಿಹರಿಸಿ. ಕರ್ನಾಟಕ ಮತ್ತು ಆಂಧ್ರ ಗಡಿಗಳಿಂದ ಅಂತಾರಾಜ್ಯ ಪರಸ್ಪರ ಒಪ್ಪಂದದ ಕೆಎಸ್‌ಆರ್‌ಟಿಸಿ ಮತ್ತು ಎಪಿಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಿಕೊಡಿ ಎಂದು ವಿನಂತಿಸಿದ್ದಾರೆ ಶ್ರೀಸಾಯಿ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...