CRIMENEWSದೇಶ-ವಿದೇಶ

ಗೆಳೆಯ ನೀಡುತ್ತಿದ್ದ ಮಾನಸಿಕ ಕಿರುಕುಳಕ್ಕೆ ಬೇಸತ್ತು ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯೊಬ್ಬರುಯ ಗೆಳೆಯನ ಮಾನಸಿಕ ಕಿರುಕುಳದಿಂದ ಬೇಸತ್ತು ಮುಂಬೈನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮುಂಬೈ ನಗರದ ನಿವಾಸಿ ಸ್ತುತಿ ಸೋನ್ವಾನೆ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಂಡಿಎಸ್‌ ವ್ಯಾಸಂಗ ಮಾಡುತ್ತಿದ್ದ ಸ್ತುತಿ, ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಈಕೆ ಮೋಸ ಮಾಡಿದ್ದಾಳೆಂದು ಗೆಳೆಯ ಅವಮಾನಿಸುತ್ತಿದ್ದ. ಜತೆಗೆ ಮನಸ್ಸಿಗೆ ನೋವುಂಟು ಮಾಡುವ ಹೇಳಿಕೆ ನೀಡುತ್ತಿದ್ದ.

ಹೀಗಾಗಿ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಈಕೆ ಬರೆದಿರುವ ಡೆತ್‌ನೋಟ್‌ನಲ್ಲಿ ದೆಹಲಿಯ ಹೃದಯವಿದ್ರಾವಕ ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ್ದಾಳೆ.

ಮುಂಬೈನ ಆಂಟೋಪ್ ಹಿಲ್ ಬಳಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಆಕೆ ತನ್ನ ಕೋಣೆಯಿಂದ ಹೊರಬರದಿದ್ದಾಗ, ಪೋಷಕರು ಕರೆ ಮಾಡಿದ್ದಾರೆ.

ಆದರೆ, ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೋಣೆಯ ಬಾಗಿಲು ಒಡೆದು ನೋಡಿದಾಗ, ಅವಳು ಸೀಲಿಂಗ್‌ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಈ ಘಟನೆ ಸಂಬಂಧ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಕೆಯ ಗೆಳೆಯನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ...