NEWSಕೃಷಿನಮ್ಮರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮೂರುದಿನ ಭಾರಿ ಮಳೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಅಲ್ಲದೆ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇಲ್ಮೈ ಸುಳಿಗಾಳಿ ಜೋರಾಗಿರುವುದರಿಂದ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ, ಮಲೆನಾಡು, ಕೊಡಗು, ಮೈಸೂರು, ಕೋಲಾರ ಹಾಸನ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 25ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.

ಸಮುದ್ರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗಾಳಿಯ ವೇಗ ಹೆಚ್ಚಾಗಲಿದೆ. ಕರಾವಳಿಯಲ್ಲಿ ಗಂಟೆಗೆ 140ರಿಂದ 150 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ