NEWSನಮ್ಮರಾಜ್ಯಬೆಂಗಳೂರುಸಂಸ್ಕೃತಿ

ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬಕ್ಕೆ ಉಪ ಮುಖ್ಯಮಂತ್ರಿ ಡಿಕೆಶಿ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನ್ ಬಾಕ್ಸಿಂಗ್ ಬಿ‌ಎಲ್ಆರ್ ಪೌಂಡೇಷನ್ ವತಿಯಿಂದ ಡಿಸೆಂಬರ್ 1 ರಿಂದ 11ರವರೆಗೆ ನಗರದಾದ್ಯಂತ “ಅನ್ ಬಾಕ್ಸಿಂಗ್ BLR ಹಬ್ಬ” ವನ್ನು ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವೆನ್ಯೂ ರಸ್ತೆಯ ರಾಜಮಾರ್ಕೆಟ್ ವೃತ್ತ ಬಳಿ ಚಾಲನೆ ನೀಡಿದರು.

ಬೆಂಗಳೂರು ಹಬ್ಬದ ಅಂಗವಾಗಿ ಚಿಕ್ಕಪೇಟೆಯಲ್ಲಿ ನಡೆದ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಂದು ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ. ಪ್ರಶಾಂತ್ ಪ್ರಕಾಶ್ ಹಾಗೂ ಅವರ ಸ್ನೇಹಿತರು  ಈ  ಹಬ್ಬವನ್ನು ಆಚರಿಸುತ್ತಿದ್ದಾರೆ. ಬೆಂಗಳೂರಿನ 1.40 ಕೋಟಿ ಜನರು ಈ ಹಬ್ಬದಲ್ಲಿ ಪಾಲ್ಗೊಳಳುವ ಮೂಲಕ ಖುಷಿ ಹಂಚಿಕೊಳ್ಳಬೇಕು ಎಂದ ಅವರು,  ನಾಡಪ್ರಭು ಕೆಂಪೇಗೌಡರು ಇದೇ ಜಾಗದಿಂದ ಎಲ್ಲ ವೃತ್ತಿ, ಎಲ್ಲ ಜನಾಂಗ, ಎಲ್ಲ ಧರ್ಮವನ್ನು ಒಟ್ಟಿಗೆ ಸೇರಿಸಿ ಬೆಂಗಳೂರು ನಗರ ಕಟ್ಟಿದರು ಎಂದು ಹೇಳಿದರು.

ಬೆಂಗಳೂರು ವಿಶ್ವಕ್ಕೆ ದೊಡ್ಡ ಮಾದರಿಯಾಗಿದೆ. ಪ್ರಪಂಚದ ಎಲ್ಲ ಜನ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ಇದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯ ಕಾರಣ. ಇದನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಈ ದೇಶದ ಆಸ್ತಿ ನಮ್ಮ ಸಂಸ್ಕೃತಿ. ಎಲ್ಲ ವರ್ಗದ ಜನ ಸುಭಿಕ್ಷವಾಗಿ ಇರಬೇಕು ಎಂಬುದು ನಮ್ಮ ಆಸೆ ಎಂಧರು.

ಇನ್ನು ಈ ಬೆಂಗಳೂರು ಹಬ್ಬವನ್ನು 11 ದಿನಗಳ ಕಾಲ ಆಚರಿಸಲು ರೂಪಿಸಲಾಗಿದೆ. ಈ ವರ್ಷ ಅವರು ಅವರದೇ ಆದ ರೀತಿಯಲ್ಲಿ ಈ ಹಬ್ಬ ಆಚರಿಸುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಬಿಬಿಎಂಪಿ, ಮೆಟ್ರೋ ಸೇರಿದಂತೆ ಎಲ್ಲ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಎಲ್ಲ ಸಂಘಟನೆ ವ್ಯಾಪಾರಿಗಳು ಇದರಲ್ಲಿ ಪಾಲ್ಗೊಂಡು ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಅಂದು ಕೆಂಪೇಗೌಡರು ಈ ಸ್ಥಳದಿಂದ ನಾಲ್ಕು ದಿಕ್ಕಿಗೆ ನಾಲ್ಕು ಜೋಡೆತ್ತಿನ ಗಾಡಿಯನ್ನು ತೆಗೆದುಕೊಂಡು ಹೋಗಿದ್ದರು. ಆ ಪದ್ಧತಿ ಮುಂದುವರಿಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದ್ದು, ಈ ಸುಸಂದರ್ಭದಲ್ಲಿ ನಾನು ಭಾಗಿಯಾಗಿ ಚಾಲನೆ ನೀಡಿದ್ದೇನೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಸಂಘಟನೆ, ಹೋರಾಟ ಮಾಡಿ, ಇಲ್ಲಿ ಬಂದು ಊಟ ಮಾಡುತ್ತಿದ್ದ ಕಾಲ ಈಗ ನೆನಪಿಗೆ ಬರುತ್ತಿದೆ ಎಂದು ಹಳೆಯದನ್ನು ಮೆಲುಕು ಹಾಕಿದರು.

ಈ ಹಬ್ಬವನ್ನು ಆಚರಣೆ ಮಾಡಿ ನಮ್ಮ ಬದುಕಿನಲ್ಲಿ ನೆಮ್ಮದಿ ಕಂಡುಕೊಳ್ಳುವುದು ನಿಮ್ಮ ನಮ್ಮ ಕೈಯಲ್ಲಿದೆ. ಡಿಸೆಂಬರ್‌ನಲ್ಲಿ ಮಳೆ ಇಲ್ಲದಾಗ ಈ ಹಬ್ಬ ಆರಂಭವಾಗುತ್ತಿದ್ದು, ಈಗ ಶುಭ ಗಳಿಗೆಯಲ್ಲಿ ಶುಭ ಮುಹೂರ್ತದಲ್ಲಿ ನಿಮ್ಮ ಸಂತೋಷಕ್ಕಾಗಿ ಈ ಹಬ್ಬ ಆಚರಿಸಲಾಗುತ್ತಿದೆ. ಕಲೆ, ಸಾಹಿತ್ಯ, ಆಹಾರ, ನೃತ್ಯ, ನಾಟಕ ಸೇರಿದಂತೆ ವಿವಿಧ ಕ್ಷೇತ್ರಗಳ ಮೂಲಕ ಬೆಂಗಳೂರಿನ 300ಕ್ಕೂ ಹೆಚ್ಚು ಕಡೆಗಳಲ್ಲಿ ಈ ಹಬ್ಬವನ್ನು ಆಚರಿಸುತ್ತಿದ್ದು ಪ್ರತಿಯೊಬ್ಬರೂ ಭಾಗವಹಿಸಿ ಎಂದು ಕರೆ ನೀಡಿದರು.

ಮುಂದೆ ಪ್ರತಿ ವಾರ್ಡ್, ವಿಧಾನಸಭಾ ಕ್ಷೇತ್ರದಲ್ಲಿ ಈ ಹಬ್ಬವನ್ನು ಆಯೋಜಿಸಿ ಆಯಾ ಭಾಗದ ಜನ ಅಲ್ಲೇ ಈ ಹಬ್ಬವನ್ನು ಆನಂದಿಸುವಂತೆ ಮಾಡಲಾಗುವುದು. ಎಲ್ಲರೂ ತಮ್ಮ ಮನೆಗಳಲ್ಲೂ ಈ ಹಬ್ಬದ ರೀತಿ ಅಲಂಕಾರ ಮಾಡಿ ಸುಂದರ ವಾತಾವರಣ ಮೂಡಿಸಬೇಕು. ಆ ಮೂಲಕ ನಮ್ಮ ಇತಿಹಾಸ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಬಾಕ್ಸಿಂಗ್ ಬಿಎಲ್ಆರ್ ಹಬ್ಬದ ವಿವರ: ಅನ್ ಬಾಕ್ಸಿಂಗ್ ಬಿಎಲ್ಆರ್ ಹಬ್ಬ ಆಚರಣೆಯ ಕುರಿತು https://habba.unboxingblr.com/ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರಗಳನ್ನು ನಾಗರಿಕರು ಪಡೆಯಬಹುದಾಗಿದೆ.

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ವಲಯ ಆಯುಕ್ತ ಡಾ. ಆರ್.ಎಲ್ ದೀಪಕ್, ಆರ್. ಸ್ನೇಹಲ್, ವಿನೋತ್ ಪ್ರಿಯಾ, ಅನ್ ಬಾಕ್ಸಿಂಗ್ ನಿರ್ದೇಶಕ ಪ್ರಶಂತಾ ಪ್ರಕಾಶ್, ಅನ್ ಬಾಕ್ಸಿಂಗ್ ಬಿಎಲ್ಆರ್ ಹಬ್ಬದ ನಿರ್ದೇಶಕ ರವಿಚಂದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ