NEWSಬೆಂಗಳೂರು

ವಾಹನಗಳ ಎಂಟ್ರಿ – ಎಕ್ಸಿಟ್ ಪಾಯಿಂಟ್ ವೈಜ್ಞಾನಿಕವಾಗಿ ರೂಪಿಸಿ: ಲೋಖಂಡೆ ಸ್ನೇಹಲ್ ಸುಧಾಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟನ್ನು ವೈಜ್ಞಾನಿಕವಾಗಿ ರೂಪಿಸಿ ಎಂದು ಪೂರ್ವ ನಗರ ಪಾಲಿಕೆ ಅಪರ ಆಯುಕ್ತ (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ಹೇಳಿದ್ದಾರೆ.

ಇಂದು ನಗರ ಪಾಲಿಕೆಯ ಕೆ.ಆರ್.ಪುರಂ ವಲಯ-2ರ ವ್ಯಾಪ್ತಿಯ ಹೊರ ವರ್ತುಲ ರಸ್ತೆ ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಚೆಳ್ಳಕೆರೆ, ಬಾಬುಸಾಪಾಳ್ಯ, ರಾಮಮೂರ್ತಿ ನಗರ ಹಾಗೂ ಕಲ್ಯಾಣ ನಗರದಲ್ಲಿರುವ ಹೊರ ವರ್ತುಲ ರಸ್ತೆಯ ಒಳಬರುವ ಮತ್ತು ಹೊರ ಹೋಗುವ ದಾರಿಗಳು ತುಂಬಾ ಕಿರಿದಾಗಿದ್ದು ಹಾಗೂ ಅವೈಜ್ಞಾನಿಕವಾಗಿ ರೂಪಿಸಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿರುವುದನ್ನು ಗಮನಿಸಿದ್ದೇನೆ.

ಹೀಗಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮತ್ತು ನಗರ ಪಾಲಿಕೆ ಇಂಜಿನಿಯರಿಂಗ್ ಇಲಾಖೆ ಸಮನ್ವಯ ಸಾಧಿಸಿಕೊಂಡು ಹೊರ ವರ್ತುಲ ರಸ್ತೆಯ ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳನ್ನು ಸರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ವಾಹನ ದಟ್ಟಣೆ ತಗ್ಗಿಸಿ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ರಾಮಮೂರ್ತಿ ನಗರ ಜಂಕ್ಷನ್ ಪರಿಶೀಲಿಸಿದ ಅಪರ ಆಯುಕ್ತರು ಪ್ರಮುಖ ಜಂಕ್ಷನ್‌ಗಳಲ್ಲೇ ಹೆಚ್ಚು ದಟ್ಟಣೆ ಉಂಟಾಗುತ್ತಿದ್ದು, ಸರಿಯಾದ ಕ್ಯಾರೇಜ್ ವೇ, ಪಾದಚಾರಿ ಮಾರ್ಗ ಅಭಿವೃದ್ಧಿ, ಹಾಗೂ ಮಲ್ಟಿ ಮೋಡಲ್ ಕನೆಕ್ಟಿವಿಟಿ ಸೌಲಭ್ಯ ಕಲ್ಪಿಸುವ ಮೂಲಕ ಜಂಕ್ಷನ್ ಅಭಿವೃದ್ಧಿ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ನಡೆದ ಪರಿಶೀಲನೆಯಲ್ಲಿ ಮುಖ್ಯ ಅಭಿಯಂತರರಾದ ಕೃಷ್ಣಮೂರ್ತಿ, ಕಾರ್ಯಪಾಲಕ ಅಭಿಯಂತರರಾದ ಭಾಗ್ಯಮ್ಮ, ಗಿರೀಶ್ ಸಂಚಾರಿ ವೃತ್ತ ನಿರೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ಇದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ