CRIMENEWSಶಿಕ್ಷಣ

ದೇವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಯೋಗದ ಅಧ್ಯಕ್ಷ  ನಾಗಣ್ಣಗೌಡ ಭೇಟಿ

ವಿಜಯಪಥ ಸಮಗ್ರ ಸುದ್ದಿ
  • ಗಾಯಗೊಂಡ ಮೂವರು ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರ ಮತ್ತು ಆಯೋಗವು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡುತ್ತೇವೆ, ಆದರೆ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡದ ಕಾಮಗಾರಿ ಸರಿಯಾಗಿ ಮಾಡಿಲ್ಲ, ಶಾಲೆಯ ಗೋಡೆಗೆ ಮತ್ತು ಸಜ್ಜೆಗೆ ಯಾವುದೇ ರೀತಿಯ ಲಿಂಕ್ ಇಲ್ಲದೆ ಕಟ್ಟಿದ್ದಾರೆ, ಕಂಬಿ ಕಟ್ಟದೆ ಸುಮ್ಮನೆ ಎರಡು ಇಂಚು ಇಟ್ಟಿಗೆ ಸಿಮೆಂಟ್ ಹಾಕಿ ಬಿಟ್ಟಿದ್ದಾರೆ, ಇದು ಹೆಚ್ಚಿನ ದಿನಗಳು ನಿಲ್ಲುವುದಿಲ್ಲ, ಆದರೆ ಇಷ್ಟು ವರ್ಷ ಹೇಗೆ ತಡೆದಿತ್ತು ಎನ್ನುವುದು ಆಶ್ಚರ್ಯ, ಈ ರೀತಿ ಆಗದಂತೆ ಮುಂದೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಶಿಕ್ಷಕರು ಸಹ ನಮಗೆ ತಿಳಿಸಿದ್ದಾರೆ, ಮುಂಜಾಗ್ರತೆ ಕ್ರಮ ವಹಿಸಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ, ನಮಗೆ 2016ರಲ್ಲಿ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿ ಕಾಮಗಾರಿ ಮಾಡುವ ಬಗ್ಗೆ ದೂರು ನೀಡುತ್ತಾರೆ. ಮಕ್ಕಳು ನಮ್ಮ ದೇಶದ ಆಸ್ತಿ, ಅದಕ್ಕಾಗಿ ಗುಣಮಟ್ಟದ ಕಾಮಗಾರಿ ಮಾಡಬೇಕು, ಆದರೆ ಅವರು ಕಟ್ಟಡ ಕಾಮಗಾರಿ ಮಾಡುವ ಇಂಜಿನಿಯರ್‌ಗಳು ಬೇಜವಾಬ್ದಾರಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಶಾಲೆಯಲ್ಲಿ ಮಕ್ಕಳು ಓದುವುದಕ್ಕೆ ಬರುತ್ತಾರೆ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು, ಮೂರು ಮಕ್ಕಳಿಗೆ ಬೇಕಾದ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ. ಇದು ದುಃಖಕರ ಸಂಗತಿ, ಈಗಾಗಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

ಎಲ್ಲ ಹಳೆ ಮತ್ತು ಹೊಸ ಶಾಲೆಗಳ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರನ್ನು ಒದಗಿಸಲು ಉಮಾ ಮಹಾದೇವನ್ ಅವರು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ನಾವು ಮಕ್ಕಳ ಸುರಕ್ಷತೆಗೆ ಮೊದಲು ಆದ್ಯತೆ ನೀಡುತ್ತೇವೆ. ಹಾಗೇ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟವನ್ನು ನೀಡುವಾಗ ಶುಚಿತ್ವವನ್ನು ಕಾಪಾಡಬೇಕು ಎಂದರು.

ಇನ್ನು ಮಕ್ಕಳಿಗೆ ಕುಡಿಯುವ ನೀರು ಮತ್ತು ಉತ್ತಮ ಗುಣಮಟ್ಟದ ಊಟವನ್ನು ನೀಡಿದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹಾಗೂ ಶಿಕ್ಷಣದಲ್ಲಿ ಉತ್ತಮವಾಗಿ ಕಲಿಯುತ್ತಾರೆ. ಸೇವಾ ಮನೋಭಾವನೆ ಮನಸ್ಥಿತಿಯಿಂದ ಶಾಲಾ ಕಟ್ಟಡ ನಿರ್ಮಿಸಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಭೆ ನಡೆಸಿ ಇನ್ನು ಮುಂದೆ ಈ ರೀತಿ ಆಗದಂತೆ ಇಂಋವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಶಾಲಾ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ