NEWSನಮ್ಮಜಿಲ್ಲೆಸಂಸ್ಕೃತಿ

ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ದೇವರ ದಾಸಿಮಯ್ಯ ಜಯಂತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ ಜಯಂತಿಯನ್ನು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು.

ನೂತನ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ‘ದೇವರ ದಾಸಿಮಯ್ಯ’ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ವೃತ್ತಿಯಲ್ಲಿ ನೇಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ.  ಶಿವನ ಅಪಾರ ಭಕ್ತರಾಗಿದ್ದು, ರಾಮನಾಥ ಇವರ ಅಂಕಿತನಾಮ.

ಇನ್ನು ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. ಅವರ ವಚನಗಳು ಇಂದಿಗೂ ಪ್ರಸ್ತುತ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ