NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದ ಅಭಿವೃದ್ಧಿಯಲ್ಲಿ ದೇವರಾಜ ಅರಸು ಕೊಡುಗೆ ಅಪಾರ: ಸಚಿವ ಕೆಎಚ್‌ಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ದೇವರಾಜ ಅರಸು ಅವರು ಶೋಷಿತ ವರ್ಗದ ಎಲ್ಲ ಬಡವರ ಜೀವನ ಸುಧಾರಣೆಗಾಗಿ ಶ್ರಮಿಸಿದ್ದವರು, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್‌ನಲ್ಲಿ ಇರುವ ಡಿ‌.ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸು ಅವರು ಬಡವರ ಧ್ವನಿಯಾಗಿದ್ದರು ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ನಿಂತವರು. ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಶಿಕ್ಷಣ ಮತ್ತು ಸಮಾಜದ ಶೋಷಿತ ವರ್ಗಗಳಿಂದ ಬಂದ ವಿದ್ಯಾರ್ಥಿಗಳಿಗೆ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್‌ಗಳ ಸ್ಥಾಪನೆಗೆ ಒತ್ತು ನೀಡಿದ್ದರು ಎಂದರು.

ಇನ್ನು ಭೂಮಿಯನ್ನು ಉಳುವವನೇ ಮಾಲೀಕ ಎಂಬ ಕಾನೂನು ಜಾರಿಗೆ ತಂದು ಶ್ರೀಮಂತ ಮತ್ತು ಬಡವರ ನಡುವಿನ ಅಂತರವನ್ನು ಕಡಿಮೆ ಮಾಡಿದರು. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿದರು. ಕರ್ನಾಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳಲ್ಲಿ ದೇವರಾಜ ಅರಸು ಕೂಡ ಒಬ್ಬರಾಗಿದ್ದರು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್. ಮಾತನಾಡಿ ದೇವರಾಜ ಅರಸು ಅವರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಆಗಿದ್ದರು, ಸಾಮಾಜಿಕ ಅಸಮತೋಲನೆಯನ್ನು ತೊಡೆದು ಹಾಕಲು ಶ್ರಮಿಸಿದ್ದದವರು. ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಯನ್ನು ಹೋಗಲಾಡಿಸಲು ಒತ್ತು ನೀಡಿದರು. ವಿಶೇಷ ಮೀಸಲಾತಿ, ವಿಶ್ವವಿದ್ಯಾಲಯಗಳ ನಿರ್ಮಾಣ ಸೇರಿದಂತೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ, ಹಲವು ಯೋಜನೆಗಳನ್ನು ಜಾರಿಗೆ ತಂದರು. ಹೀಗಾಗಿ ಇವರನ್ನು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಕರೆಯುತ್ತಾರೆ ಎಂದು ಹೇಳಿದರು.

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಕೂಡ ಆಚರಿಸಲಾಗುತ್ತಿದೆ. ಸದ್ಭಾವನಾ ದಿನ ಎಂದು ಈ ದಿನವನ್ನು ಕರೆಯುತ್ತಾರೆ. ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಜಿಲ್ಲಾಧಿಕಾರಿಗಳು ಬೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್, ದೇವನಹಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಸೇರಿದಂತೆ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು