
ಬೆಂಗಳೂರು: ಘಾಟಿ ಸುಬ್ರಮಣ್ಯ ಕ್ಷೇತ್ರ ಐತಿಹಾಸಿಕ ಹಿನ್ನಲೆಯನ್ನು ಹೊಂದಿರುವ ಪುಣ್ಯಕ್ಷೇತ್ರವಾಗಿದ್ದು ಇಲ್ಲಿ ಹೆಚ್ಚಿನ ಮೂಲಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಪ್ರಾಧಿಕಾರದ ವತಿಯಿಂದ ಹೆಚ್ವಿನ ಅಭಿವೃದ್ಧಿ ಮಾಡಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯಪಟ್ಟರು.
ಇಂದು ವಿಧಾನಸೌಧದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದಸ್ಟೆ ಈ ಭಾಗವು ಅಭಿವೃದ್ಧಿಮಾಡಬೇಕು ಪ್ರತಿವರ್ಷ ನಡೆಯುವ ಧನಗಳ ಜಾತ್ರೆ ವಿಶೇಷವಾಗಿದ್ದು ನೀರಿನ ವ್ಯವಸ್ಥೆ, ಕಲ್ಯಾಣ ಮಂಟಪ,ಅನ್ನದಾಸೋಹ ಭವನ ಒಮ್ಮೆ ಗೆ 5 ಸಾವಿರ ಜನರು ಊಟ ಮಾಡಲು ಅನಿಕೂಲಕರವಾದ ಭವನ ನಿರ್ಮಾಣದ ಕುರಿತು ಸಭೆ ಯಲ್ಲಿ ಚರ್ಚಿಸಿದರು.
ಈ ಭಾಗಕ್ಕೆ ರಸ್ತೆಯ ಅಗಲೀಕರಣದೊಂದಿಗೆ ಡಬಲ್ ರಸ್ತೆಯ ಅಭಿವೃದ್ಧಿ ಮಾಡುವುದರೊಂದಿಗೆ ಕ್ಷೇತ್ರದ ಮೂಲಸೌಕರ್ಯಗಳ ಅಭಿವೃದ್ಧಿಯು ನೂರು ವರ್ಷಗಳಿಗೆ ಅನುಕೂಲಕರವಾದ ಯೋಜನೆಯನ್ನು ರೂಪಿಸಿ ನಿರ್ಮಾಣ ಮಾಡಬೇಕಿದೆ ಎಂದರು.
ಈ ಕ್ಷೇತ್ರವು ಹೆಚ್ಚಿನ ಪ್ರೇಕ್ಷಕರನ್ನು ಸೆಳೆಯುವಂತೆ ಅಭಿವೃದ್ಧಿ ಮಾಡಲು ಕಾರ್ಯೋಣ್ಮುಕರಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್, ಬೆ.ಗ್ರಾ.ಜಿಲ್ಲಾಧಿಕಾರಿ ಬಸವರಾಜ್, ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಖಠಾರಿಯಾ, ಆಹಾರ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ, ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ,ಪ್ರಾಧಿಕಾರದ ಸದಸ್ಯರಾದ ಮಹೇಶ್, ಹಾಗೂ ದೇವಸ್ಥಾನ ದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅರ್ಚಕರು ಉಪಸ್ಥಿತರಿದ್ದರು.