NEWSನಮ್ಮಜಿಲ್ಲೆಸಂಸ್ಕೃತಿ

ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿ ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ಧಿ: ಡಿಸಿಎಂ ಶಿವಕುಮಾರ್

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ ಪಡೆದಿದೆ, ಸಹಸ್ರಾರು ಭಕ್ತರು ಪ್ರತಿ ದಿನ ಆಗಮಿಸುತ್ತಿದ್ದಾರೆ. ಹೀಗಾಗಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾ ಕೆ.ಎಚ್ ಮುನಿಯಪ್ಪ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡಿ ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

ವಿಜಯಪಥ - vijayapatha.in
Deva
the authorDeva

Leave a Reply

error: Content is protected !!