ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ 6ನೇ ತರಗತಿ ಓದುತ್ತಿದ್ದ ಬಾಲಕಿ ದಿವ್ಯಾ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಹೇಯ ಕೃತ್ಯ ಮತ್ತು ಅಮಾನವೀಯ ಘಟನೆಯಾಗಿದೆ ಎಂದು ಒಕ್ಕಲಿಗರ ಒಕ್ಕೂಟ ಅಧ್ಯಕ್ಷ ಸಿ.ವಿ.ದೇವರಾಜ್ ಖಂಡಿಸಿದ್ದಾರೆ.
ಅಲ್ಲದೆ ಭವಿಷ್ಯದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಆರೋಪಿ ವಿರುದ್ದ ಅತೀ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಬೇಕು ಮತ್ತು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಈ ಪ್ರಕರಣದ ಬಗ್ಗೆ ವಿಳಂಬಧೋರಣೆ ತಾಳಬಾರದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳನ್ನ ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಆರೋಪಿ ವಿರುದ್ಧ ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾಲಮಿತಿಯೊಳಗೆ ಶಿಕ್ಷೆಗೆ ಗುರಿಪಡಿಸಬೇಕು. ಆಗ ಮಾತ್ರ ಇಂತಹ ಪ್ರಕರಣಗಳು ಮರುಕಳಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಗೇಹ ಇಲಾಖೆ ವಿಚಾರಣೆ ಅದು ಇದು ಎಂದು ಕಾಲ ಕಳೆಯಬಾರದು ಎಂದು ಮನವಿ ಆಗ್ರಹಿಸಿದ್ದಾರೆ.