CRIMENEWSನಮ್ಮರಾಜ್ಯ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್‌- ವರದಿ ಕೇಳಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಹಿಂದೆ ಚಿನ್ನ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಪುತ್ರಿ ರನ್ಯ ರಾವ್‌ಗೆ ಶಿಷ್ಟಾಚಾರ ಉಲ್ಲಂಘಿಸಿ ವಿಮಾನ ನಿಲ್ದಾಣದಲ್ಲಿ ವಿಐಪಿ ಟ್ರೇಟ್‌ಮೆಂಟ್ ನೀಡಿದ್ದಕ್ಕೆ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿ ಈಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದ್ದಾರೆ.

ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಬ್ಬಿಕೊಂಡಿದ್ದಾರೆ. 2026ರ ಮೇ ತಿಂಗಳಲ್ಲಿ ರಾಮಚಂದ್ರ ರಾವ್ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಲಿದ್ದಾರೆ. ಈ ಮಧ್ಯೆ ಅಂಧರೆ ನಿವೃತ್ತರಾಗುವ ಸಮಯದಲ್ಲೇ ರಹಸ್ಯ ಕ್ಯಾಮೆರಾದ ಮುಂದೆ ಬೆತ್ತಲಾಗಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಗರಂ ಆಗಿದ್ದು ಗೃಹ ಇಲಾಖೆಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ರನ್ಯಾರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲೂ ರಾಮಚಂದ್ರರಾವ್ ಹೆಸರು ದೊಡ್ಡ ಮಟ್ಟದಲ್ಲಿ ಕೇಳಿ ಬಂದಿತ್ತು. ಆಗ ಸರ್ಕಾರಕ್ಕೆ ಮುಜುಗರ ಆಗಿತ್ತು ಈಗ ರಾಸಲೀಲೆ ವಿಡಿಯೋ ವೈರಲ್ ಆಗುತ್ತಲೇ ಮತ್ತೆ ಸರ್ಕಾರಕ್ಕೆ ಮುಜುಗರವಾಗಿದೆ.

ಈ ಹಿನ್ನಲೆಯಲ್ಲಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ ನೀಡಿದ್ದು ವರದಿ ಬಂದ ಕೂಡಲೇ ರಾಮಚಂದ್ರರಾವ್ ಮೇಲೆ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಅದು ಎಐ ವಿಡಿಯೋ, ನನ್ನ ವಿರುದ್ದ ದೊಡ್ಡ ಷಡ್ಯಂತ್ರ ನಡೆದಿದೆ!:
ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಷಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಕಿಡಿಕಾರಿದ್ದಾರೆ.

ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (Al ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಶಡ್ಯಂತ್ರ ರೂಪಿಸಿವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿ!
ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸುದ್ದಿಗಾರರು ರಾಮಚಂದ್ರ ರಾವ್ ಅವರನ್ನು ಪ್ರಶ್ನಿಸಿದಾಗ, ಅವರು ಸರಿಯಾಗಿ ಉತ್ತರ ನೀಡಲಾಗದೆ ತಬ್ಬಿಬ್ಬಾದ ಪ್ರಸಂಗವೂ ನಡೆಯಿತು ವಿಡಿಯೋದಲ್ಲಿರುವುದು ನೀವೇ ಅಲ್ಲವೇ? ಸಮವಸ್ತ್ರದಲ್ಲೇ ಇಂತಹ ವರ್ತನ ಸರಿಯೇ? ಎಂಬ ನೇರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅವರು ಕಕ್ಕಾಬಿಕ್ಕಿಯಾಗಿ ಅಲ್ಲಿಂದ ನಿರ್ಗಮಿಸಿದರು. ಅವರ ಈ ವರ್ತನೆ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇನ್ನು ಈ ರಾಜ್ಯದ ಬಹುದೊಡ್ಡ ಸ್ಥಾನದಲ್ಲಿರುವ ವ್ಯಕ್ತಿಗಳೇ ಈ ರೀತಿ ನಡೆ ಅನುಸರಿಸಿದರೆ ಇವರಿಂದ ಸಾಮಾನ್ಯ ಜನರಿಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂದು ಹೇಗೆ ನಂಬುವುದು. ಅಲ್ಲದೆ ಬಹುತೇಕ ಪೊಲೀಸ್‌ ಇಲಾಖೆಯಲ್ಲಿರುವ ಅಧಿಕಾರಿಗಳು ಅಪರಾಧ ಮಾಡಿ ಲಂಚ ಕೊಟ್ಟವರ ಪರ ನಿಂತು ಅನ್ಯಾಯಾಯಕ್ಕ ಒಳಗಾದ ವ್ಯಕ್ತಿ ಲಂಚ ಕೊಡಲಿಲ್ಲ ಎಂಬ ಕಾರಣಕ್ಕೆ ಎಫ್‌ಆರ್‌ಐ ದಾಖಲಿಸುತ್ತಿರುವುದು ಶೇ.80ಕ್ಕೂ ಹೆಚ್ಚಿದೆ ಎಂದು ಹೇಳಬಹುದು.

ಅದರಲ್ಲೂ ಸಾಮಾನ್ಯ ಜನರಿಗೆ ನ್ಯಾಯ ಕೊಡಿಸಬೇಕಾದ ಸ್ಥಾನದಲ್ಲಿರುವ ಇಂಥ ಅಧಿಕಾರಿಗಳು ಮಾಡುವ ತಪ್ಪಿಗೆ ನಿರಪರಾಧಿಗಳು ವೃತ ಕೋರ್ಟ್‌ಗೆ ಅಲೆಯುವಂತಾಗುತ್ತಿದೆ. ಇದಕ್ಕೆ ಹಲವು ನಿದರ್ಶನಗಳನ್ನು ನಾವು ಕೊಡಬಹುದಾಗಿದೆ. ಇನ್ನಾದರೂ ಇವರು ತಮ್ಮ ನಡೆಯನ್ನು ಬದಾಯಿಸಿಕೊಂಡದರೆ ಒಳ್ಳೆಯದು ಎಂದು ಜನಸಾಮಾನ್ಯರು ಬಯಸುತ್ತಿದ್ದಾರೆ.

Megha
the authorMegha

Leave a Reply

error: Content is protected !!