Breaking NewsNEWS

ಅ.19ರಂದು ಸರಿ ಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಪರ ಸಿಎಂ ಮನೆ ಮುಂದೆ ಬೃಹತ್‌ ಧರಣಿ ಸತ್ಯಾಗ್ರಹ : ಮಜ್ದೂರ್‌ ಸಂಘ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು/ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಾಲ್ಕೂ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇದೇ ಅ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ನಿವಾಸದ ಮುಂದೆ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಒಕ್ಕೂಟದ ಉಪಾಧ್ಯಕ್ಷ ಹಣಮಂತಪ್ಪ ಇಟಗಿ ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ ಹಿತ ದೃಷ್ಟಿಯಿಂದ 1-1-2020ರಂದು ಆಗಿಬೇಕಿದ್ದ ವೇತನ ಪರಿಷ್ಕರಣೆ ಆಗಿಲ್ಲ. ಅಂದರೆ ಕಳೆದ 33 ತಿಂಗಳುಗಳಿಂದ ಆಗಿಲ್ಲ. ಈ ಸಂಬಂಧ ಯಾವುದೇ ಮಾತುಕತೆ ನಡೆಸಲು ಸಹ ಸರ್ಕಾರ ಮತ್ತು ಆಡಳಿತ ಮಂಡಳಿ ಮುಂದಾಗುತ್ತಿಲ್ಲ.

ಹೀಗಾಗಿ ಇದೇ ಅ.19ರ ಒಳಗೆ ಸಂಘಟನಗೆಳನ್ನು ಕರೆದು ಸರ್ಕಾರಿ ನೌಕರರಿಗೆ ಸರಿ ಸಮಾನದ ವೇತನವನ್ನು ಸಾರಿಗೆ ನೌಕರರಿಗೆ ಕೊಡುವ  ತೀರ್ಮಾನ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅ.19ರಂದು ಬೃಹತ್‌ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ಸಾರಿಗೆ ನೌಕರರಿಗೆ ವೇತನ ಆಯೋಗದ ಮಾದರಿಯಂತೆ ವೇತನ ನೀಡಬೇಕು. ಇಲ್ಲದಿದ್ದರೆ ನಾವು ನಿಮ್ಮ ಮನೆ ಮುಂದೆ ಒಂದು ಸಾವಿರಕ್ಕೂ ಹೆಚ್ಚಿನ ಪದಾಧಿಕಾರಿಗಳು ಕಾರ್ಯಕರ್ತರು ಸೇರಿ ಧರಣಿ ನಡೆಸುವುದು ಖಚಿತ ಎಂದು ಹೇಳಿದ್ದಾರೆ.

ಧರಣಿ ಸಂಬಂಧ ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿದ್ದು, ಅನುಮತಿ ಕೋರಲಾಗಿದೆ ಎಂದು ಮಜ್ದೂರ್‌  ಸಂಘ ಒಕ್ಕೂಟದ ಬೆಂಗಳೂರು ಉಪಾಧ್ಯಕ್ಷ ಮಂಜುನಾಥ ಪ್ರಸನ್ನ ತಿಳಿಸಿದ್ದಾರೆ.

ಇನ್ನು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಒಕ್ಕೂಟದ ಅಧ್ಯಕ್ಷ ವಿಶ್ವನಾಥ್‌ ಅವರ ನೇತೃತ್ವದಲ್ಲಿ ಈ ಧರಣಿ ಆಯೋಜಿಸಲಾಗಿದೆ. ಇದಕ್ಕೆ ನಾಲ್ಕೂ ನಿಗಮಗಳ ಸಮಸ್ತ ನೌಕರರು ಭಾಗವಹಿಸಬೇಕು ಎಂದು ಕರೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ