CrimeNEWSನಮ್ಮಜಿಲ್ಲೆ

ಧಾರವಾಡ: 6ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಂದು ದುಷ್ಕರ್ಮಿಗಳು ಪರಾರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಇದೇ ಜೂನ್‌ 7ರಂದು ಮದುವೆಯಾಗಬೇಕಿದ್ದ ಯುವಕನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಜಿನ್ನೂರ ಗ್ರಾಮದ ನಿಂಗಪ್ಪ ಬೂದಪ್ಪ ನವಲೂರ (28) ಹತ್ಯೆಯಾದ ಯುವಕ. ಪಾಪಿಗಳ ದಾಳಿಗೆ ಒಳಗಾಗಿದ್ದರಿಂದ ಇನ್ನೂ 6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆಯಾಗಿ ಮಸಣಕ್ಕೆ ಸೇರಿರುವುದಕ್ಕೆ ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.

ಮೃತ ಯುವಕನಿಗೆ ಜೂನ್‌ 7 ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಿಯವಾಗಿತ್ತು. ನಿಂಗಪ್ಪ ತೋಟದ ಮನೆಯಲ್ಲಿದ್ದಾಗ ಮಧ್ಯರಾತ್ರಿ ದಾಳಿ ಮಾಡಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ