ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಕೃಷ್ಣರಾಜಪೇಟೆ: ಸರ್ಕಾರಿ ಶಾಲೆಯ ದಂಪತಿಯ ಪುತ್ರಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಗಸರಹಳ್ಳಿ ಗ್ರಾಮದ ನಿವಾಸಿಗಳಾದ ಜ್ಞಾನೇಶ್ ಹಾಗೂ ರಶ್ಮಿ ಅವರ ಪುತ್ರಿ ಜೆ. ಧೃತಿ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿರುವವರು.
ಕೆ.ಆರ್.ಪೇಟೆಯ ಸಾಹುಕಾರ್ ಚಿಕ್ಕಣ್ಣಗೌಡ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಧೃತಿ ತಂದೆ ಜ್ಞಾನೇಶ್ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ರಶ್ಮಿ ಕೂಡಾ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದಾರೆ.
ಧೃತಿಯ ಸಾಧನೆಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಅವರಿಂದ ಪ್ರಶಂಸೆ. ಮುಂದೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೂ ಸಾಧನೆ ಮಾಡಿ ವೈದ್ಯೇಯಾಗಬೇಕೆಂಬ ಕನಸು ಹೊತ್ತಿರುವ ಧೃತಿಗೆ ಶುಭ ಹಾರೈಸಿವೆ.
Related

Deva