NEWSನಮ್ಮರಾಜ್ಯಸಿನಿಪಥ

ಮಿಲನ ಕಳನಾಯಕ ಖ್ಯಾತಿಯ, ಹಿಟ್ಲರ್ ಕಲ್ಯಾಣ’ ಧಾರವಾಹಿಯ ಹೀರೋ ದಿಲೀಪ್ ರಾಜ್ ಇನ್ನಿಲ್ಲ

ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮಿಲನ ಚಿತ್ರದ ಕಳನಾಯಕರಾಗಿ ಭಾರಿ ಹೆಸರು ಮಾಡಿದ್ದ ಹಾಗೂ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಮುಂಜಾನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

48 ವರ್ಷದ ಯುವ ತಲೆಮಾರಿನ ಪ್ರತಿಭೆ ದಿಲೀಪ್ ರಾಜ್ ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು.

ಬೆಳ್ಳಿತೆರೆ ಹಾಗೂ ಕಿರುತೆರೆ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಭಾರಿ ಹೆಸರುವಾಸಿಯಾಗಿದ್ದರು.

‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 48 ವರ್ಷದ ದಿಲೀಪ್‌ ರಾಜ್‌ ಕೊನೆಯದಾಗಿ ʼಲವ್‌ ಮಾಕ್ಟೇಲ್‌ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.

ದಿಲೀಪ್ ರಾಜ್ ನಿಧನಕ್ಕೆ ಹಿರಿಯ ನಟ ದೊಡ್ಡಣ್ಣ ಸಂತಾಪ ಸೂಚಿಸಿದ್ದಾರೆ. ‘ದಿಲೀಪ್ ರಾಜ್ ಅವರ ತಂದೆ ಹೆಚ್.ಎಂ. ಶಿವರುದ್ರಪ್ಪ. ಅವರು ಮೂಲತಃ ಅರಸಿಕೆರೆಯವರು. ನಮ್ಮ ಅಣ್ಣ ಹಾಗೂ ಅವರು ಒಟ್ಟಿಗೆ ಓದಿದವರು. ದಿಲೀಪ್ ರಾಜ್ ನಿಧನದ ಸುದ್ದಿ ತಿಳಿದು ನನಗೆ ಬಹಳ ಶಾಕ್ ಆಯಿತು. ಹೊಟ್ಟೆ ಉರಿಯುತ್ತದೆ. ಅವರು ನಮ್ಮ ಮಕ್ಕಳ ರೀತಿ’ ಎಂದು ನಟ ದೊಡ್ಡಣ್ಣ ಹೇಳಿದ್ದಾರೆ.

ದಿಲೀಪ್ ರಾಜ್ ಪತ್ನಿ ಶ್ರೀವಿದ್ಯಾ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ