ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದಿಂದ ಇಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿ ನೌಕರರ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಲಾಗುವುದು.
ಸಂಘದ ಗೌರವಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ಅವರ ನೃತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಇಂದು ಬೆಳಗ್ಗೆ 11.30ಕ್ಕೆ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ನೌಕರರ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.