24 ತಿಂಗಳೊಳಗೆ ಸಿವಿಲ್ ಪ್ರಕರಣಗಳು ಇತ್ಯರ್ಥ: ಹೊಸ ಕಾಯ್ದೆ ತಕ್ಷಣದಿಂದಲೇ ಜಾರಿ- ಕಾನೂನು ಸಚಿವ ಪಾಟೀಲ್

ಬೆಂಗಳೂರು: ಇನ್ನು ಮುಂದೆ ಸಿವಿಲ್ ಪ್ರಕರಣಗಳು 24 ತಿಂಗಳೊಳಗೆ ಅಂದರೆ 2 ವರ್ಷದೊಳಗೆ ಅಂತಿಮ ತೀರ್ಪು ಬರಲಿದೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿವೆ ಎಂದರು.
ಇನ್ನು ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳಿಗೆ ದಶಕ ವರ್ಷಗಳು ಕಾಯುವ/ ವಿಳಂಬಕ್ಕೆ ಮುಕ್ತಿ ನೀಡಲು ಕರ್ನಾಟಕ ಯಶಸ್ವಿಯಾಗಿ ಈ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ಸರ್ಕಾರ ಕ್ರಾಂತಿಕಾರಕ ಈ ತಿದ್ದುಪಡಿಯನ್ನು ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಮಾಡಿದೆ. ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದ್ದು, ಈ ಐತಿಹಾಸಿಕ ತಿದ್ದುಪಡಿ ರಾಷ್ಟ್ರದಲ್ಲಿಯೇ ಮೊದಲು ಎಂದ ಅವರು, ತಕ್ಷಣದಿಂದ ಈ ತಿದ್ದುಪಡಿ ಜಾರಿಗೆ ಬರಲಿದೆ ಎಂದು ವಿವರಿಸಿದರು.
ನಮ್ಮ ಶಾಸಕಾಂಗ ಮಾಡಿದ ಈ ತಿದ್ದುಪಡಿಯ ಮುಖಾಂತರ ಪ್ರತಿಯೊಂದು ಸಿವಿಲ್ ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಡ್ಡಾಯವಾದ ಪ್ರಯತ್ನ ಮಾಡಬೇಕು. ಎರಡು ತಿಂಗಳೊಳಗಾಗಿ ರಾಜಿ ಸಂಧಾನದ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದಿದ್ದಾಗ, ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂಬ ಶಾಸನಾತ್ಮಕ ಅವಕಾಶ ದೊರೆತಿರುವುದು ಕಕ್ಷಿದಾರನ ಪಾಲಿಗೆ ತೆರೆದ ಭಾಗ್ಯದ ಬಾಗಿಲು ಎಂದು ಸಚಿವರು ಅಭಿಪ್ರಾಯಪಟ್ಟರು.
ಇನ್ನು ನ್ಯಾಯಾಲಯಗಳ ಕಲಾಪಗಳಲ್ಲಿ ವಿಳಂಬ ನಿರಾಕರಿಸುವ, ಚರಿತ್ರಾರ್ಹ ಸುಧಾರಣೆಗೆ ಶಾಸನಾತ್ಮಕ ಅಂಕುಶ ಹೊಂದಿರುವ ಈ ತಿದ್ದುಪಡಿ ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳಲ್ಲಿ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ, ತಾರ್ಕಿಕ ಅಂತ್ಯ ಕಾಣುವುದಕ್ಕೆ ನಿಶ್ಚಿತಗೊಳಿಸುವ ಶಾಸನ ಜಾರಿಗೆ ಬಂದಿದೆ. ಈ ಪೂರ್ವಗಾಮಿ ಪ್ರಗತಿಯ ಜತೆ-ಜತೆಗೆ ಈ ಕಾನೂನು ನ್ಯಾಯಾಲಯಗಳಲ್ಲಿ ಆಗುವ ವಿಳಂಬಕ್ಕೆ ಇತಿಶ್ರೀ ಹಾಡಲಿದೆ. ಇನ್ನು ಮುಂದೆ ನ್ಯಾಯಾಲಯಗಳಲ್ಲಿ, ವಿಳಂಬವಿಲ್ಲದೇ ಪ್ರಕರಣಗಳು ಇತ್ಯರ್ಥವಾಗಲು ಶಾಸನ ಮಾಡಲಾಗಿದೆ ಎಂದರು.
ನ್ಯಾಯಾಲಯದಲ್ಲಿ ಪ್ರಕರಣ ದಾಖಲಾದ ದಿನದಂದು ಅಥವಾ ಮೊದಲ ವಿಚಾರಣೆಯ ದಿನದಂದು ಅಂತಿಮ ತೀರ್ಪು / ಆದೇಶದ ದಿನಾಂಕ ನಿರ್ಣಯವಾಗುವ ಅತ್ಯಂತ ಪರಿಣಾಮಕಾರಿ ಮಹತ್ವದ ಶ್ರೇಷ್ಠವಾದ ನ್ಯಾಯಾಂಗದ ಕಾರ್ಯ ನಿರ್ವಹಣೆಗೆ ಈ ತಿದ್ದುಪಡಿ ಇಂಬು ನೀಡಲಿದೆ ಎಂದು ತಿಳಿಸಿದರು.
ಕಳೆದ ಬೆಳಗಾವಿ ಅಧಿವೇಶನದಲ್ಲಿ 17.12.2024 ರಂದು ವಿಧಾನ ಸಭೆಯಲ್ಲಿ 18.12.2024 ವಿಧಾನ ಪರಿಷತ್ತಿನಲ್ಲಿ ಈ ಕಾನೂನು ಅಂಗೀಕರಿಸಲಾಗಿತ್ತು. ರಾಜ್ಯಪಾಲರು ಈ ವಿಧೇಯಕವನ್ನು ಸಂವಿಧಾನದ ಅನುಚ್ಛೇದ 200 ಮತ್ತು 254 ರಡಿಯಲ್ಲಿ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯ್ದಿರಿಸಿದ್ದರು. ಈ ಕಾನೂನಿಗೆ ರಾಷ್ಟ್ರಪತಿಯವರು 19.05.2025 ರಂದು ತಮ್ಮ ಅಂಕಿತ ಹಾಕಿದ್ದಾರೆ.
ಲಿಖಿತ ಹೇಳಿಕೆ, ಸಾಕ್ಷ್ಯ ಸಂಗ್ರಹ ಎಲ್ಲದಕ್ಕೂ ಕಾಲಮಿತಿ ನಿಗದಿಪಡಿಸಲು ಶಾಸನ ಅವಕಾಶ ಕಲ್ಪಿಸಿದೆ. ಯಾವುದೇ ಹಂತದಲ್ಲಿ ಒಂದು ತಿಂಗಳೊಳಗಾಗಿ ಕೇವಲ 3 ಮುಂದೂಡಿಕೆ ಅಥವಾ 3 ದಿನಾಂಕಗಳ ಅವಕಾಶ ಮಾತ್ರ ಕಲ್ಪಿಸಲಾಗುವುದು. ಯಾವುದೇ ಹಂತದಲ್ಲಿ ಅರ್ಜಿದಾರ-ಪ್ರತಿವಾದಿ ಈ ಅವಕಾಶದಲ್ಲಿ ಸಲ್ಲಿಸದಿದ್ದರೆ, ಅಂಥವರ ಹೇಳಿಕೆಗಳನ್ನು ಶೂನ್ಯವೆಂದು ಪರಿಗಣಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಈ ಕಾನೂನಿನಲ್ಲಿ ಪ್ರಕರಣ ನಿರ್ವಹಣೆಯನ್ನು ಪುನರ್ ವ್ಯಾಖ್ಯಾನ ಮಾಡಲಾಗಿದೆ. ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ಈ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದರಿಂದ ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ವಿಳಂಬಕ್ಕೆ ಕಾರಣವಾಗುವುದಿಲ್ಲ. ಆಗದಂತೆ ಸುನಿಶ್ಚಿತಗೊಳಿಸುವ ಜನಪರ ಕಾನೂನು ಅಸ್ತಿತ್ವಕ್ಕೆ ತರಲಾಗಿದೆ.
ನ್ಯಾಯದಾನ ವ್ಯವಸ್ಥೆಯನ್ನು ಸಂಪೂರ್ಣವಾಗಿ, ಸುಧಾರಣೆಗೆ ಈ ಕಾನೂನು ಅವಕಾಶ ಕಲ್ಪಿಸಿದೆ. ರಾಜ್ಯದ ಕಕ್ಷಿದಾರರ ನ್ಯಾಯಾಲಯಕ್ಕೆ ವೃಥಾ ಅಲೆದಾಟ ತಪ್ಪಿಸಿ, ಆರ್ಥಿಕವಾಗಿ ಕೈಗೆಟಕುವ ರೀತಿಯಲ್ಲಿ ತ್ವರಿತ ನ್ಯಾಯದಾನ ವ್ಯವಸ್ಥೆಗೆ ಒಂದು ನಿರ್ವಹಣಾ ವ್ಯವಸ್ಥೆಯನ್ನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಕಲ್ಪಿಸಿ, ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ವಿವರಿಸಿದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...