NEWSಉದ್ಯೋಗನಮ್ಮರಾಜ್ಯ

ಸರ್ಕಾರಿ ನೌಕರರ 100 ಕುಟುಂಬಗಳಿಗೆ ಅನುಕಂಪದ ನೇಮಕಾತಿ ಆದೇಶ ಪತ್ರ ವಿತರಣೆ: ಸಚಿವ ದಿನೇಶ್ ಗುಂಡೂರಾವ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿವೃತ್ತಿಗೂ ಮೊದಲೇ ನಿಧನರಾದ 100 ಸರ್ಕಾರಿ ನೌಕರರ ಕುಟುಂಬದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿಕೊಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬುಧವಾರ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಫಲಾನುಭವಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಬಳಿಕ ಮಾತನಾಡಿದ ಸಚಿವರು, ಕುಟಂಬಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದವರನ್ನು ಕಳೆದುಕೊಂಡಾಗ ದೊಡ್ಡ ಆಘಾತವಾಗುತ್ತದೆ. ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ. ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕೆನ್ನುವ ನಿಯಮವಿದ್ದರೂ ಸಾಕಷ್ಟು ವಿಳಂಬವಾಗುತ್ತದೆ. ಆದರೆ, ನಮ್ಮ ಸರ್ಕಾರ ಯಾರನ್ನೂ ಅಲೆದಾಡಿಸದೇ ತಕ್ಷಣ ಉದ್ಯೋಗ ನೀಡಿದೆ ಎಂದು ತಿಳಿಸಿದರು.

ಸದ್ಯ 116 ಮಂದಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲಾಗಿದ್ದು, ಇನ್ನೂ 60 ಪ್ರಕರಣಗಳು ಬಾಕಿ ಉಳಿದಿವೆ. ಅವುಗಳನ್ನು ಕೂಡ ಅತಿ ಶೀಘ್ರದಲ್ಲಿಯೇ ಇತ್ಯರ್ಥಗೊಳಿಸುವುದಾಗಿ ಇದೇ ವೇಳೆ ಸಚಿವ ಗುಂಡೂರಾವ್ ಭರವಸೆ ನೀಡಿದರು. ‌

ಸರ್ಕಾರಿ ಕೆಲಸ ಪಡೆದುಕೊಂಡವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಇಲಾಖೆಗೆ, ಸಮಾಜಕ್ಕೆ ಮಾದರಿಯಾಗಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ನೇಮಕಾತಿಗೆ ಬೇಕಾದ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರ ಉದ್ಯೋಗ ಸಿಗುವಂತೆ ಮಾಡಿರುವ ಕೆಲಸ ಶ್ಲಾಘನೀಯ ಎಂದರು.

ಇನ್ನು ಅಭ್ಯರ್ಥಿಗಳ ವಿದ್ಯಾರ್ಹತೆಗೆ ಅನುಸಾರವಾಗಿ ಆರೋಗ್ಯ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಆರೋಗ್ಯಾಧಿಕಾರಿ, ಗ್ರೂಪ್ ಡಿ ದರ್ಜೆ ಹುದ್ದೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.‌

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ...