NEWSನಮ್ಮಜಿಲ್ಲೆನಮ್ಮರಾಜ್ಯ

ಸಂವಿಧಾನ ಜಾಗೃತಿಗಾಗಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿಲು ದೊಡ್ಡಬಳ್ಳಾಪುರದ ಪಟ್ಟಣ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ ನಾಳೆಯಿಂದ ಸಂವಿಧಾನ ಜಾಗೃತಿ ಜಾಥಾ ನೆಲಮಂಗಲದಲ್ಲಿ ಸಂಚರಿಸಲಿದ್ದು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂವಿಧಾನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮಹಿಳೆಯರು ಕಳಶ ಹೊರುವ ಮೂಲಕ ಬರಮಾಡಿಕೊಂಡರು, ಸೈಕಲ್ ಜಾಥಾ, ಎತ್ತಿನ ಗಾಡಿ ಜಾಥಾ, ಬೈಕ್ ರ‍್ಯಾಲಿಯೊಂದಿಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು.

ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉಮಾಪತಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ವಿವಿಧ ಸಂಘಟನೆಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ