Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ಬೆಂ.ಗ್ರಾಮಾಂತರ: ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿಪಡಿಸಿ ಜಿಲ್ಲಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 3500 ರೂ. ಗಳಿಂದ 4 ಸಾವಿರ ರೂ.ಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಗಳ ರೈತರಿಂದ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ನಿರ್ದಿಷ್ಟ ಕಂಪನಿಗಳ ದೊಡ್ಡ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ನಿಗದಿತ 3350 ರೂ. ಹಾಗೂ ಸಣ್ಣ ಯಂತ್ರಗಳಿಗೆ 2700 ರೂ.ಬಾಡಿಗೆ ಮಾತ್ರ ಪಡೆಯುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 57370 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಆವರಿಸಿದೆ. ಈಗ ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದೆ. ಕಟಾವು ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವ ಕಾರ್ಯವನ್ನು ಯಂತ್ರಗಳ (combined harvesters) ಮೂಲಕ ಕೈಗೊಳ್ಳುತ್ತಿದ್ದಾರೆ‌.

ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು ಜುಲೈ 6 ರಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ) ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ ಪ್ರಕಾರ, ಪ್ರಸ್ತುತ ಇಂಧನ ವೆಚ್ಚ, ಕಾರ್ಮಿಕರ ಕೂಲಿ ವೆಚ್ಚ ಮತ್ತು ಇತರ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರ 3350 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ 2700 ರೂ. ಪರಿಷ್ಕರಿಸಿ ಬಾಡಿಗೆ ನಿಗದಿಪಡಿಸಲಾಗಿದೆ.

ಈ ದರಗಳನ್ನು ಮೀರದಂತೆ ಬಾಡಿಗೆಯನ್ನು ಪಡೆಯಬೇಕು. ತಪ್ಪಿದರೆ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...