NEWSನಮ್ಮಜಿಲ್ಲೆನಮ್ಮರಾಜ್ಯ

ಚಾಮರಾಜನಗರ ಗಡಿಭಾಗಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ಭದ್ರತೆ ಪರಿಶೀಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಪ್ರವಾಸ ಕೈಗೊಂಡು ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು.

ಬೆಳಿಗ್ಗೆ ಪುಣಜನೂರು ಪೊಲೀಸ್ ಚೆಕ್ ಪೋಸ್ಟ್ ಹಾಗೂ ಆರ್‌ಟಿಒ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರ್‌ಟಿಒ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಗೆ ಹೊಂದಿಕೊಂಡಿರುವ ರಾಜ್ಯ ಮತ್ತು ತಮಿಳುನಾಡು ಗಡಿ ಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಬಗ್ಗೆ ಖಾತರಿಪಡಿಸಬೇಕು ಎಂಬುದರ ಜತೆಗೆ ಅಗತ್ಯ ನಿರ್ದೇಶನ ನೀಡಿದರು.

ಬಳಿಕ ಚಾಮರಾಜನಗರ ತಾಲೂಕಿನ ಬಿಸಲವಾಡಿ ಚೆಕ್‌ ಪೋಸ್ಟ್‌, ಮೂಡ್ಲಹೊಸಹಳ್ಳಿ, ಯತ್ತಿಕಟ್ಟೆಬೆಟ್ಟಗೆ ಭೇಟಿ ನೀಡಿ ಗಡಿಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಪರಿಸ್ಥಿತಿಗಳನ್ನು ಅವಲೋಕಿಸಿ, ಅಧಿಕಾರಿಗಳಿಗೆ ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

ಬಿಸಲವಾಡಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೂ ಭೇಟಿ ನೀಡಿ ವಿದ್ಯಾರ್ಥಿಗಳು ಸೇವಿಸುವ ಆಹಾರ ಗುಣಮಟ್ಟ, ವಿದ್ಯಾರ್ಥಿನಿಲಯದ ವ್ಯವಸ್ಥೆಗಳನ್ನು ಕೂಡ ಪರಿಶೀಲೀಸಿದರು. ಈ ವೇಳೆ ಮಕ್ಕಳೊಂದಿಗೆ ಸಂವಾದ ನಡೆಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ