ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
Deva14.09.2025

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು.
ಇದೇ ಸೆ.22 ರಂದು ಪ್ರಾರಂಭವಾಗಲಿರುವ ದಸರಾಗೆ ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಗೌರವ ಧನನೀಡಿ ಸಚಿವರು ಆಹ್ವಾನ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ದಸರಾಗೆ ಯಾವತ್ತೂ ಯದುವಂಶದಿಂದ ಕಿರಿಕಿರಿ ಆಗಿಲ್ಲ. ಪ್ರತಿ ದಸರಾಗೂ ಯದುವಂಶದ ಸಹಕಾರ ಇರುತ್ತದೆ. ಈ ಬಾರಿಯ ದಸರಾಗೂ ಉತ್ತಮ ಸಹಕಾರ ನೀಡುತ್ತೇವೆ ಎಂದು ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ.
ಅಲ್ಲದೆ ಕಳೆದ ಬಾರಿ ಆದ ಒಂದೆರಡು ಗೊಂದಲಗಳ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಪ್ರಮೋದಾ ದೇವಿ ಒಡೆಯರ್ ತಂದಿದ್ದಾರೆ. ಕೆಲ ಸಲಹೆ ಕೂಡ ಕೊಟ್ಟಿದ್ದು ಅವರ ಸಲಹೆ ಸ್ವೀಕರಿಸಿದ್ದೇವೆ ಎಂದರು.
ಬಾನು ಮುಷ್ತಾಕ್ ಅವರಿಂದ ದಸರಾವನ್ನು ಉದ್ಘಾಟಿಸುತ್ತಿರುವ ಬಗ್ಗೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಯದುವಂಶಕ್ಕೆ ದಸರಾದ ಆಹ್ವಾನ ನೀಡಿದ್ದಾರೆ.
Related

Deva







