
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಏ.5 ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಹಾಗೂ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ಶಾಸಕ ಶರತ್ ಕುಮಾರ ಬಚ್ಚೇಗೌಡ ವಹಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ.ಬಾಬಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ ಮತ್ತಿತರರು ಉಪಸ್ಥಿತರಿರುವರು.