ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಪ್ರಕರಣ ಆರೋಪಿಯಾದ ಇವರು ಕೊರೊನಾ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಪೊಲೀಸರು ಸಂಪತ್ರಾಜ್ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದರು.
ಪೊಲೀಸರಿಂದ ತಪ್ಪಿಸಿಕೊಂಡು ಓಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದರು. ಸೋಮವಾರ ರಾತ್ರಿ ಅವರ ಪುಲಿಕೇಶಿ ನಗರದ ತನ್ನ ಮನೆಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಧಾವಿಸಿ ಬಂಧಿಸಿರುವುದಾಗಿ ಸಿಸಿಪಿಎ ಮೂಲಗಳು ತಿಳಿಸಿವೆ.
ಆರೋಪಿಯನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು.