NEWSನಮ್ಮಜಿಲ್ಲೆನಮ್ಮರಾಜ್ಯ

ಡಿಕೆಶಿ ಅವರಿಗೂ ಮುಖ್ಯಮಂತ್ರಿ ಆಗುವ ಯೋಗವಿದೆ : ಭವಿಷ್ಯ ನುಡಿದ ಕೋಡಿಶ್ರೀಗಳು

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್‌.ಪೇಟೆ: ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರವು ಜನತೆಯ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ ಐದು ವರ್ಷಗಳನ್ನು ಸಂಪೂರ್ಣಗೊಳಿಸಲಿದೆ ಎಂದು ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಪೀಠಾಧಿಪತಿ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಹೇಳಿದ್ದಾರೆ.

ಇಂದು ನಗರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಇದೇ ವೇಳೆ ಭವಿಷ್ಯ ನುಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲು ಡಿಕೆಶಿ ಕೊಡುಗೆಯೂ ಇದೆ. ಮಂತ್ರಿ ಮಂಡಲ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಪ್ರಾದೇಶಿಕವಾರು ಜಿಲ್ಲಾವಾರು ಸೂಕ್ತ ಪ್ರಾತಿನಿಧ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಸಲಹೆ ನೀಡಿದರು.

ಇನ್ನು ಅರಸೀಕರೆಗೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ಧರಾಮಯ್ಯ ಅವರಿಗೆ ನಿಮಗೆ ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವ ಯೋಗವಿದೆ ಎಂದು ಹೇಳಿದ್ದೆ ಅದು ನಿಜವಾಗಿದೆಯಲ್ಲದೇ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿ ಯಾರದೇ ಹಂಗಿಲ್ಲದೇ ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ನುಡಿದಿದ್ದೆ ಎಂದು ತಿಳಿಸಿದರು.

ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ, ಲೋಕಸಭಾ ಚುನಾವಣೆಯ ನಂತರ ಸಣ್ಣ ಕಂಟಕ ಉಂಟಾಗಲಿದೆ ಅದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಕೋಡಿಶ್ರೀಗಳು ಮಾರ್ಮಿಕವಾಗಿ ಭವಿಷ್ಯದ ಗೋಜಲೊಂದರ ಸೂಚನೆ ನೀಡಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?