NEWSಆರೋಗ್ಯನಮ್ಮರಾಜ್ಯ

6 ತಿಂಗಳಿಂದ ವೇತನ ಆಗದಿರುವುದಕ್ಕೆ ಬೇಸತ್ತು ಸುಳ್ಯದ ಕೊಲ್ಲಮೊಗ್ರು ಸರ್ಕಾರಿ ಆಸ್ಪತ್ರೆ ವೈದ್ಯರ ರಾಜೀನಾಮೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ವೈದ್ಯಾಧಿಕಾರಿಗಳಿಗೆ 6ತಿಂಗಳುಗಳಿಂದಲೂ ಸರಿಯಾಗಿ ವೇತನ ಆಗದ ಕಾರಣ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ವೈದ್ಯ ಡಾ.ಕುಲದೀಪ್ ಎಂ.ಡಿ. ಅವರು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು.

ಇತ್ತ ಸರಿಯಾಗಿ ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿತ್ತಿದೆ.

ಇನ್ಬು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಳಿಗೆ ಈ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜ್ಯದ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇದೇ ರೀತಿ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ಸರ್ಕಾರ ಸಂಬಳ ಬಾಕಿ ಉಳಿಸಿಕೊಂಡಿದೆ.

ಈ ನೌಕರರ ಸಂಬಳವಿಳಂಬದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸುತ್ತಿವೆ. ಆದರೂ ಇಂಥ ಘಟನೆಗಳಿಗೆ ಸರ್ಕಾರ ಎಡೆಮಾಡಿಕೊಟ್ಟಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Megha
the authorMegha

Leave a Reply

error: Content is protected !!