NEWSಆರೋಗ್ಯನಮ್ಮರಾಜ್ಯ

6 ತಿಂಗಳಿಂದ ವೇತನ ಆಗದಿರುವುದಕ್ಕೆ ಬೇಸತ್ತು ಸುಳ್ಯದ ಕೊಲ್ಲಮೊಗ್ರು ಸರ್ಕಾರಿ ಆಸ್ಪತ್ರೆ ವೈದ್ಯರ ರಾಜೀನಾಮೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ವೈದ್ಯಾಧಿಕಾರಿಗಳಿಗೆ 6ತಿಂಗಳುಗಳಿಂದಲೂ ಸರಿಯಾಗಿ ವೇತನ ಆಗದ ಕಾರಣ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ವೈದ್ಯ ಡಾ.ಕುಲದೀಪ್ ಎಂ.ಡಿ. ಅವರು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು.

ಇತ್ತ ಸರಿಯಾಗಿ ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿತ್ತಿದೆ.

ಇನ್ಬು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಳಿಗೆ ಈ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜ್ಯದ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇದೇ ರೀತಿ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ಸರ್ಕಾರ ಸಂಬಳ ಬಾಕಿ ಉಳಿಸಿಕೊಂಡಿದೆ.

ಈ ನೌಕರರ ಸಂಬಳವಿಳಂಬದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸುತ್ತಿವೆ. ಆದರೂ ಇಂಥ ಘಟನೆಗಳಿಗೆ ಸರ್ಕಾರ ಎಡೆಮಾಡಿಕೊಟ್ಟಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Megha
the authorMegha

Leave a Reply

error: Content is protected !!
Latest news
KKRTC ನೌಕರರ 14 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಆದೇಶ ಯಾವುದೇ ಸಮಯದಲ್ಲಾದರೂ  ಹೊರಬೀಳಬಹುದು ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್‌ ಬೃಹತ್‌ ಪಾದಯಾತ್ರೆ- ಇದು ಕೇವಲ ಭಾಷಣಕ್ಕಷ್ಟೇ ಅಲ್ಲ: ನಿಖಿಲ್ ಕುಮಾರಸ್ವಾಮಿ ಎಚ್... ನಿಂತಿರುವ ಕಾಲೇಜು ವಿದ್ಯಾರ್ಥಿ ಚುನಾವಣೆ ಇದೇ ವರ್ಷದಿಂದ ಮತ್ತೆ ಆರಂಭ: ಸಿಎಂ ಡಿಕೆಶಿ ಅಪ್ಪ ಅಂದ್ರೆ ಭಯ- ಧೈರ್ಯ ಅಪ್ಪ ಅಂದ್ರೆ ಭವಿಷ್ಯದ ಗುರು ಅಪ್ಪ ಅಂದ್ರೆ ಆಲದ ಮರ ಇದಾವುದು ಅಲ್ಲ ಪದಗಳಿಗೆ ನಿಲುಕದ ದೈವ ಗ್ರಾಚ್ಯುಟಿ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸಲ್ಲ KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ...