NEWSನಮ್ಮಜಿಲ್ಲೆ

3 ಕೋಟಿ ರೂ.ಗಳಲ್ಲಿ ದೊಡ್ಡಬಳ್ಳಾಪುರ ನಾಗರ ಕೆರೆ ಪುನರುಜ್ಜೀವನ: ಡಿಸಿ ಬಸವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ (Foxcon) ಸಂಸ್ಥೆ 3 ಕೋಟಿ ರೂ.ಗಳಲ್ಲಿ ಸಿ.ಇ.ಆರ್ (ಕಾರ್ಪೋರೇಟ್ ಎನ್ವಿರಾನ್ಮೆಂಟ್ ರೆಸ್ಪಾನ್ಸಿಬಲ್) ಅನುದಾನದಡಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫಾಕ್ಸ್ ಕಾನ್ ಸಂಸ್ಥೆಯವರು ನಾಗರಕೆರೆ ಪುನರುಜ್ಜೀವನಗೊಳಿಸುವ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. ಈ ಕುರಿತು ಇಂದು ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಕೂಲಂಕಷವಾಗಿ ಚರ್ಚಿಸಲಾಗಿದೆ.

ಕರೆ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗಳ್ಳಲಾಗುತ್ತಿರುವ ಕಾಮಗಾರಿಯ ಸಂಬಂಧ ವಿವಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಸಲಹೆಗಳನ್ನು ಪಡೆದು ಅಂತಿಮವಾಗಿ ಫಾಕ್ಸ್ ಕಾನ್ (Foxcon) ರವರು ಸಿಇಆರ್ (corporate environment responsible) ಅನುದಾನದಡಿ ಸಿದ್ಧಪಡಿಸಲಾಗಿರುವ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದನೆಗಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅನುಮೋದನೆ ಬಂದ ನಂತರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೈಗಾರಿಕೆಗಳ ವಿಸ್ತೃತ ವರದಿ ನೀಡಲು ಸೂಚನೆ:
ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಮೂಲ, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿ ವರದಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ರಮೇಶ್.ಬಿ.ಎಸ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಅಂತರ್ಜಲ ಇಲಾಖೆ ಹಿರಿಯ ಭೂ ವಿಜ್ಞಾನಿ ಪಲ್ಲವಿ ಪರಿಸರ ಅಧಿಕಾರಿ ವಿಜಯ, Foxcon ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ