NEWSನಮ್ಮರಾಜ್ಯರಾಜಕೀಯ

ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ: ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಮಸಮಾಜ ನಿರ್ಮಾಣದ ಸದುದ್ದೇಶ ಹೊಂದಿರುವುದಾಗಿ ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಂತಹ ಅಸಮಾನ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?: ರಾಜ್ಯದ ಜನರ ತೆರಿಗೆ ಹಣವನ್ನು ಕೇವಲ ಬೆಂಗಳೂರನ್ನು ವಿಸ್ತರಿಸಲು ವಿನಿಯೋಗಿಸಿದರೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ಜನರು ಏನು ಮಾಡಬೇಕು? ಈಗಾಗಲೇ ಹೆಚ್ಚಿನ ಯುವಕರು ಉದ್ಯೋಗಕ್ಕಾಗಿ ದೂರದ ಬೆಂಗಳೂರನ್ನು ಆಯ್ಕೆ ಮಾಡುವ ಬದಲು ಹೈದರಾಬಾದ್‌, ಪುಣೆ, ಮುಂಬೈ, ಪಣಜಿಯಂತಹ ನೆರೆ ರಾಜ್ಯದ ನಗರಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಿಂದ ಯುವಕರೆಲ್ಲ ಬೇರೆ ರಾಜ್ಯಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ನೂತನ ವಿಮಾನ ನಿಲ್ದಾಣವನ್ನು ತುಮಕೂರು ಅಥವಾ ರಾಮನಗರದಲ್ಲಿ ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದೂ ಕೂಡ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯ ಭಾಗವಾಗಿದೆ. ಮಧ್ಯ ಕರ್ನಾಟಕಕ್ಕೆ ಪ್ರಾಶಸ್ತ್ಯ ನೀಡಬೇಕಿದೆ. ನೂತನ ವಿಮಾನ ನಿಲ್ದಾಣವು ಮಧ್ಯ ಕರ್ನಾಟಕ ಭಾಗದಲ್ಲಿ ನಿರ್ಮಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇಡೀ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಕೇವಲ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿಗಳಿಗೆ ಸೀಮಿತಗೊಂಡ ಉಪಮುಖ್ಯಮಂತ್ರಿಯಾಗಿದ್ದಾರೆಯೋ ಎಂಬ ಅನುಮಾನ ಮೂಡುತ್ತಿದೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಹೊರಟಿರುವ ನಿರ್ಧಾರ ಆಕ್ಷೇಪಾರ್ಹವಾಗಿದೆ. ಕೇವಲ ಹೆಸರು ಬದಲಿಸುವುದರಿಂದ ಅಭಿವೃದ್ಧಿಯಾಗುವುದಿದ್ದರೆ ಕರ್ನಾಟಕದ ಹೆಸರನ್ನೇ ಬೆಂಗಳೂರು ಎಂದು ಮಾಡುವುದು ಒಳಿತಲ್ಲವೇ? ಆಗ ಇಡೀ ಕರ್ನಾಟಕವೇ ಅಭಿವೃದ್ಧಿಯಾದಂತೆ ಆಗುತ್ತದೆಯಲ್ಲವೇ?

ಡಿ.ಕೆ. ಶಿವಕುಮಾರ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುವುದು ಕೇವಲ ಜಿಲ್ಲೆಯ ಹೆಸರು ಬದಲಾವಣೆಯಾಗಿಲ್ಲ, ಕರಾಳ ರಿಯಲ್‌ ಎಸ್ಟೇಟ್‌ ದಂಧೆಗೆ ಪರವಾನಗಿ ಪಡೆಯುವ ಪ್ರಸ್ತಾವನೆಯಾಗಿದೆ.

ರಾಮನಗರವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿ, ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ ಕೆಲವೇ ಕೆಲವು ಭೂಮಾಲೀಕರಿಗೆ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಿಲ್ಲ. ತಮ್ಮ ಆಧಾರ್‌ ಸೇರಿದಂತೆ ಮತ್ತಿತರ ದಾಖಲೆ ಪತ್ರಗಳಲ್ಲಿ ಜಿಲ್ಲೆ ಹೆಸರನ್ನು ತಿದ್ದಿಸುವ ಸಲುವಾಗಿ ಸರ್ಕಾರಿ ಕಚೇರಿಗಳನ್ನು ಅಲೆಯಬೇಕಾದ ಪರಿಸ್ಥಿತಿ ಬಂದೊದಗುತ್ತದೆ.

ನಿಜಕ್ಕೂ ಅಭಿವೃದ್ಧಿಪಡಿಸುವುದಿದ್ದರೆ, ಹೊಸ ಇಂಡಸ್ಟ್ರಿಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಿದ್ದರೆ, ಜನಸಾಮಾನ್ಯರಿಗೆ ನೆರವಾಗುವುದಿದ್ದರೆ ಹುಬ್ಬಳ್ಳಿ-ಧಾರವಡ ಅವಳಿ ನಗರಗಳಂತೆ ರಾಮನಗರ-ಚನ್ನಪಟ್ಟಣವನ್ನು ಅಭಿವೃದ್ಧಿ ಪಡಿಸಬಹುದು. ಆದರೆ ಆ ಭಾಗದ ಜನರನ್ನು ಉದ್ಧರಿಸುವ ಯಾವ ಯೋಚನೆಯೂ ಶಿವಕುಮಾರ್‌ ಅವರಿಗೆ ಇದ್ದಂತಿಲ್ಲ.

ಇನ್ನು ಅಲ್ಲಿನ ಭೂಮಾಲೀಕರಿಗೆ ಲಾಭವನ್ನು ಮಾಡಿಕೊಡುವ ಮೂಲಕ ತನ್ನ ರಾಜಕೀಯ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವ ತಂತ್ರವನ್ನು ಹೆಣೆದಿದ್ದಾರೆ. ಈ ಭಾಗವು ಹೆಚ್ಚಿನ ರಾಜಕಾರಣಿಗಳ ಲ್ಯಾಂಡ್‌ ಬ್ಯಾಂಕ್‌ ಆಗಿರುವುದರಿಂದ ಅವರಿಗೆ ಅನುಕೂಲ ಮಾಡಿಕೊಟ್ಟರೆ ತನ್ನ ಭವಿಷ್ಯದ ರಾಜಕೀಯ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳಬಹುದು ಎಂಬ ಕೇಡು ಆಲೋಚನೆ ಹೊಂದಿದ್ದಾರೆ.

ರಾಮನಗರ, ಚನ್ನಪಟ್ಟಣಗಳನ್ನು ಬೆಂಗಳೂರಿಗೆ ಸೇರಿಸುವ ಪ್ರಸ್ತಾವವನ್ನು ತಿರಸ್ಕರಿಸಬೇಕು. ಹುಬ್ಬಳ್ಳಿ-ಧಾರವಾಡ ಮಾದರಿಯಲ್ಲಿ ಉಭಯ ನಗರಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂಬ ಅಂಶಗಳನ್ನು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರವನ್ನು ಕಟು ಪದಗಳಿಂದ ಟೀಕಿಸಿ ಬರೆದಿದ್ದಾರೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ