NEWSನಮ್ಮಜಿಲ್ಲೆಬೆಂಗಳೂರು

ಸಾರ್ವಜನಿಕ ಸಂಚಾರ ಸಾರಿಗೆ ವ್ಯವಸ್ಥೆ ಉತ್ತಮ ಗೊಳಿಸಲು ಆಗ್ರಹಿಸಿ ‘ಡಬಲ್ ದಿ ಬಸ್’ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರ್ವಜನಿಕ ಸಂಚಾರ ಸಾರಿಗೆ ವ್ಯವಸ್ಥೆ ಉತ್ತಮ ಗೊಳಿಸಲು ಆಗ್ರಹಿಸಿ ನಗರದ ಜಲ ವಾಯು ವಿಹಾರ (ಕಮ್ಮನಹಳ್ಳಿ) ಮತ್ತು ಅಗರ ಬಸ್ ನಿಲ್ದಾಣದಲ್ಲಿ ಬಸ್ಸು ಪ್ರಯಾಣಿಕರು, ನಾಗರಿಕರು ಮತ್ತು ವಿವಿಧ ನಾಗರಿಕ ಸೇವಾ ಸಂಸ್ಥೆಗಳ ಸದಸ್ಯರು ‘ಡಬಲ್ ದಿ ಬಸ್’ ಅಭಿಯಾನ ನಡೆಸಿದರು.

ʻವಿಶ್ವ ಕಾರು ಮುಕ್ತ ದಿನʼ ದಂದು, ನಾಗರಿಕರ ನೇತೃತ್ವದಲ್ಲಿ ನಡೆದ ಈ ಆಂದೋಲನದಲ್ಲಿ, ಪ್ರಯಾಣಿಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು. ಸುಸ್ಥಿರ ಮತ್ತು ಎಲ್ಲರಿಗೂ ಸಮಾನ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಹೂಡಿಕೆ ಮಾಡುವಂತೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು.

ಮೂರು ದಿನಗಳ ಕಾಲ ನಾಗರಿಕರ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ನಡೆದ ಈ ಅಭಿಯಾನವನ್ನು ಬೆಂಗಳೂರು ಸೇರಿದಂತೆ ಮುಂಬೈ, ಚೆನ್ನೈ, ಪುಣೆ ಮುಂತಾದ ಪ್ರಮುಖ ನಗರಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

“ಬೆಂಗಳೂರಿನಲ್ಲಿ ಶೇಕಡಾ 81ರಷ್ಟು ಜನರು ತಮ್ಮ ದೈನಂದಿನ ಪ್ರಯಾಣಕ್ಕಾಗಿ ಬಿಎಂಟಿಸಿ (BMTC) ಬಸ್ಸುಗಳನ್ನು ಬಳಸುತ್ತಾರೆ (ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆ 42 ಲಕ್ಷಕ್ಕೂ ಹೆಚ್ಚು). ನಗರ ಸಾರಿಗೆ ವ್ಯವಸ್ಥೆ ನಮ್ಮ ನಗರದ ಸಂಚಾರ ವ್ಯವಸ್ಥೆಯ ಬೆನ್ನೆಲುಬಾಗಿದೆ.

ಆದರೂ ಪ್ರಯಾಣಿಕರು ದಿನನಿತ್ಯ ಜನರಿಂದ ಕಿಕ್ಕಿರಿದ ಬಸ್ಸುಗಳನ್ನು ಏರಬೇಕಾಗುತ್ತದೆ. ಸರ್ಕಾರ ಬಸ್ಸುಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಮೂಲಕ ಪ್ರಯಾಣಿಕರಿಗೆ ಸುರಕ್ಷಿತ, ವಿಶ್ವಾಸಾರ್ಹ, ಪರಿಸರ-ಸ್ನೇಹಿ ಸಾರಿಗೆ ವ್ಯವಸ್ಥೆ ಒದಗಿಸಬಹುದುʼʼ ಎಂದು ಎಚ್‌ಎಸ್‌ಆರ್‌ ಲೇ ಔಟಿನ ಸಮುದಾಯ ಕಾರ್ಯಪಡೆಯ/ಕಮ್ಯುನಿಟಿ ಟಾಸ್ಕ್‌ಫೊರ್ಸ್‌ನ ಸ್ವಯಂಸೇವಕ ಸಚಿನ್ ಪಂಡಿತ್ ಹೇಳಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ