ವರದಕ್ಷಿಣೆ ಕಿರುಕುಳ ಆರೋಪ: ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR ದಾಖಲು

ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಸೊಸೆಯೇ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಎಸ್.ನಾರಾಯಣ್ ಅವರು ಪ್ರತಿಕ್ರಿಯೆ ನೀಡಿದ್ದು, ವರ್ಷದ ಹಿಂದೆಯೇ ಸೊಸೆ ಮನೆ ಬಿಟ್ಟು ಹೋಗಿದ್ರು. ಈಗ ವರದಕ್ಷಿಣೆ ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್ ಆಗಿ ನಮ್ಮ ದೇಶದಲ್ಲಿ ಎಲ್ಲ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ ಹೇಳಿದರು.
ನಾವೇನೋ ಹಿಂಸೆ ಕೊಟ್ಟಿದ್ದೇವೆ ಅಂತ ದೂರು ಕೊಟ್ಟಿದ್ದಾರೆ. ಅದು ಕೋರ್ಟಿಗೆ ಹೋಗಿದೆ. ನಾವು ಅದರ ಬಗ್ಗೆ ಹೇಳಿದರೆ ಅವರಿಗೇ ಅವಮಾನ ಮಾಡಿದಂತೆ ಆಗುತ್ತೆ. ಪಾಪ ಹೆಣ್ಮಗು ಅಲ್ವಾ? ಅವರಿಗೆ ತೇಜೋವಧೆ ಮಾಡಬಾರದು ಅಂತ ನಾರಾಯಣ್ ಹೇಳಿದರು.
ಈಗ ದೂರು ಕೊಟ್ಟಿದ್ದಾರೆ. ಅವರಿಗೆ ಸುಃಖ, ಸಂತೋಷ ಎಲ್ಲಿ ಸಿಗುತ್ತೋ ಅಲ್ಲಿಗೆ ಹೋಗಿದ್ದಾರೆ. ನನ್ನ ವ್ಯಕ್ತಿತ್ವ ಎಲ್ಲರಿಗೂ ಗೊತ್ತು, ನಾವು ಸದಾ ಹೆಣ್ಮಕ್ಕಳನ್ನು ಗೌರವರಿಂದ ಕಾಣುವಂತಹವರು ಅಂತ ಹೇಳಿದರು.
ಎಫ್ಐಆರ್ ಏಕೆ?: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ 2ನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ.
ಈ ದೂರಿನನ್ವಯ ಮಾವ ಎಸ್.ನಾರಾಯಣ್, ಅತ್ತೆ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.
ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಪೊಲೀಸರಲ್ಲಿ ಮನವಿ ಮಾಡಿಕೊಡಿದ್ದಾರೆ.
Related


You Might Also Like
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...
ಮೈಸೂರು-ಮನಕಲಕುವ ಘಟನೆ: ಆಸ್ಪತ್ರೆ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜತೆ ಭಿಕ್ಷೆ ಬೇಡಿದ ಕುಟುಂಬ
ಮೈಸೂರು: ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆಯ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಹೌದು....
ಡಾ.ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರ ಘೊಷಣೆ- ಅಭಿಮಾನಿಗಳಲ್ಲಿ ಹರ್ಷ
ಬೆಂಗಳೂರು: ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಮ್ಮ ದಶಕಗಳ ಬೇಡಿಕೆ ಫಲಿಸಿದೆ ಎಂದು...
ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ....
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ
ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ...
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 47,848 ಮನೆಗಳು ಮಂಜೂರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303...
ಅರ್ಹರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಬೇಕು: ಅಧಿಕಾರಿಗಳಿಗೆ ಸಿಎಂ ತಾಕೀತು
ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ...
ಸಾರಿಗೆ ನೌಕರರ ವೇತನ ಹೆಚ್ಚಳ-38 ತಿಂಗಳ ಹಿಂಬಾಕಿ ಪ್ರಕರಣ ಸೆ.17ಕ್ಕೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ಭ್ರಷ್ಟ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದಿಂದ ನಾಗರೀಕ ಸನ್ಮಾನ
ಬೆಂಗಳೂರು: ಕಾರ್ಮಿಕ ಪರವಾನಿಗೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಗೆ ಸಿಕ್ಕಿದ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದ ವತಿಯಿಂದ ಸನ್ಮಾನ ಮಾಡಲು ಕಚೇರಿಗೆ ಹೋದಾಗ ಅಧಿಕಾರಿ...