Please assign a menu to the primary menu location under menu

NEWSನಮ್ಮಜಿಲ್ಲೆಸಂಸ್ಕೃತಿ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ ಜಿಲ್ಲಾ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ನೇಮಕ

ವಿಜಯಪಥ ಸಮಗ್ರ ಸುದ್ದಿ

ಗದಗ: ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಗದಗ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಹಳ್ಳೂರುಮಠ ಸಾ. ಬೆಳದಡಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಾ. ದೇವು ಹಡಪದ ಸಾ. ಮುಂಡರಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಚನ್ನವೀರ ಸ್ವಾಮಿಗಳು ಹಿರೇಮಠ ಕಡಣಿ ತಿಳಿಸಿದ್ದಾರೆ.

ಶನಿವಾರ ಸಂಜೆ, ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನಮಠದಲ್ಲಿ ಹಮ್ಮಿಕೊಂಡಿದ್ದ, ಡಾ. ಪಂಡಿತ ಪುಟ್ಟರಾಜ ಗುರುವರ್ಯರ 12ನೆಯ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಲೆಗೆ ಕಣ್ಣಿತ್ತ ಪೂಜ್ಯರು ಜಿಲ್ಲಾಮಟ್ಟದ ಕವಿಗೋಷ್ಠಿ ಸಮಾರಂಭದ ಸಾನ್ನಿಧ್ಯ ವಹಿಸಿಕೊಂಡಿದ್ದ ನಾಡೋಜ ಡಾ. ಅನ್ನದಾನ ಮಹಾ ಸ್ವಾಮಿಗಳವರು ಜಿಲ್ಲಾ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯವರಿಗೆ ನೇಮಕಾತಿ ಪ್ರಮಾಣ ಪತ್ರ ನೀಡಿ ಆಶೀರ್ವದಿಸಿದರು.

ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯ ಎಲ್ಲ ತಾಲೂಕ ಘಟಕಗಳಿಗೆ ಆಯ್ಕೆಯಾದ ಸಂಚಾಲಕರಾದ ಶರಣು ಚೆಲುವಾದಿ ರೋಣ, ರಾಘವೇಂದ್ರ ಗೆಜ್ಜಿ ನರಗುಂದ, ಗುಡ್ಡಪ್ಪ ಹಡಪದ ಲಕ್ಷ್ಮೇಶ್ವರ, ಶಿವಾನಂದ ಭಜಂತ್ರಿ ಗದಗ’ ರತ್ನಾ ಬದಿ ಶಿರಹಟ್ಟಿ ಮತ್ತು ಪ್ರಕಾಶ್ ಪಾಲಿಮರ್ ಗಜೇಂದ್ರಗಡ ಅವರನ್ನು ಕೂಡ ಪ್ರಮಾಣ ಪತ್ರ ನೀಡಿ ಸತ್ಕರಿಸಿ, ಪೂರ್ಣ ಪ್ರಮಾಣದ ತಾಲೂಕ ಘಟಕಗಳ ರಚನೆಗೆ ಅಧಿಕಾರ ನೀಡಲಾಯಿತು ಎಂದು ತಿಳಿಸಿದ್ದಾರೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಡಾ. ನಿಂಗು ಸೋಲಗಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷ ಗಚ್ಚಣ್ಣವರ, ಕಾರ್ಯದರ್ಶಿ ಎ. ಕೆ. ಮುಲ್ಲಾ  ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ... ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ... ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನ... ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌ KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ