CRIMENEWSನಮ್ಮಜಿಲ್ಲೆ

ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಖಾಸಗಿ ಬಸ್​ ಭಸ್ಮ- 40 ಪ್ರಯಾಣಿಕರು ಪಾರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್​ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಪರಿಣಾಮ ಹೊತ್ತಿಉರಿದಿರುವ ಘಟನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿಂದ ಕಲಬುರಗಿಗೆ ತೆರಳುತ್ತಿದ್ದ ಈ ಬಸ್​ನಲ್ಲಿ 40 ಮಂದಿ ಪ್ರಯಾಣಿಕರು ಪಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​​ ಬಸ್ ಚಾಲಕ ಸೇರಿದಂತೆ ಎಲ್ಲ ಪ್ರಯಾಣಿಕರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಕಲಬುರಗಿಗೆ ಹೊರಟ್ಟಿದ್ದ ಈ ಖಾಸಗಿ ಬಸ್‌ ಸಂಜನಾ ಟ್ರಾವೆಲ್ಸ್​​ಗೆ ಸೇರಿದ್ದು. ಸಂಪೂರ್ಣ ಸುಟ್ಟು ಕರಕಲಾಗಿದ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದರಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಇಡೀ ಬಸ್ಗೆ ಬೆಂಕಿ ಆವರಿಸಿತ್ತು.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ದಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇತ್ತ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!