CRIMENEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಸಾರಿಗೆ ಬಸ್: ಪ್ರಯಾಣಿಕರು ಪಾರು

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಚಾಲಕ ನಿಯಂತ್ರಣ ತಪ್ಪಿದ ಸಾರಿಗೆ ಬಸ್​ ಕಂದಕಕ್ಕೆ ಉರುಳಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಂದು ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಅಥಣಿಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಈ ವೇಳೆ ಬಸ್​ನಲ್ಲಿದ್ದ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಅಪಘಾತ ಸಂಭವಿಸಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಬಸ್​ನ ಹಿಂಬದಿಯ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ರೋಡ್​ಹಂಪ್‌ ಹತ್ತಿ ಇಳಿಯುವ ವೇಳೆ ಬಸ್ಸಿನ ಪಾಟಾ ಮುರಿದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ರೋಡ್‌ನಲ್ಲಿ ರಸ್ತೆ ಡುಬ್ಬವನ್ನು ಅವೈಜ್ಞಾನಿಕವಾಗಿ ಹಾಕುತ್ತಿರುವುದರಿಂದ ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಅವೈಜ್ಞಾನಿಕವಾಗಿ ಹಾಕಿರುವ ರಸ್ತೆ ಡುಬ್ಬಗಳನ್ನು ತೆರವುಗೊಳಿಸಿ ವೈಜ್ಞಾನಿಕವಾದ ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ