CRIMENEWSದೇಶ-ವಿದೇಶ

ಚಲಿಸುವ ವಾಹನದಿಂದ ಪ್ರಯಾಣಿಕ ಬಿದ್ದರೆ ಚಾಲಕ ಹೊಣೆಯಲ್ಲ: ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸರ್ಕಾರಿ ಸಾರಿಗೆ ವಾಹನಗಳನ್ನೊಳಗೊಂಡು ಯಾವುದೇ ವಾಹನದಿಂದ ಪ್ರಯಾಣಿಕ ಆಕಸ್ಮಿಕವಾಗಿ ಬಿದ್ದು ಮೃತಪಟ್ಟರೆ, ಅದಕ್ಕೆ ವಾಹನದ ಚಾಲಕರು ಜವಾಬ್ದಾರರಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ 2024ರ ಜುಲೈನಲ್ಲೇ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಕೆ.ಟಿ. ಥಾಮಸ್‌ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ತೀರ್ಪು ನೀಡಿದ್ದು, ಯಾವುದೇ ವಾಹನವು ಅಪಘಾತಕ್ಕೀಡಾದರೆ ಚಾಲಕನ ನಿರ್ಲಕ್ಷತನವೇ ಕಾರಣವೆಂದು ಭಾವಿಸುವುದು ತಪ್ಪು ಎಂದು ಹೇಳಿದೆ.

ಇನ್ನು ಸೆಷನ್ಸ್ ನ್ಯಾಯಾಲಯ ಹಾಗೂ ಆಂಧ್ರ ಪ್ರದೇಶದ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿದ್ದ ಚಾಲಕನನ್ನು ಆರೋಪದಿಂದ ಬಿಡುಗಡೆ ಮಾಡುವಂತೆ ಈ ಪೀಠ ಈ ತೀರ್ಪು ನೀಡುವ ಮೂಲಕ ಆದೇಶ ಮಾಡಿದೆ.

ಆಂಧ್ರಪ್ರದೇಶದ ರಸ್ತೆ ಸಾರಿಗೆ ಸಂಸ್ಥೆಯ ಚಲಿಸುವ ಬಸ್ಸಿನಿಂದ ಮಹಿಳೆಯೋರ್ವಳು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದರು. ಆಗ ಬಸ್ಸಿನ ಚಾಲಕ ಮೊಹಮದ್ ಆಯುದ್ದೀನ್‌ನನ್ನು ತಪ್ಪಿತಸ್ಥನನ್ನಾಗಿ ಮಾಡಿ ಆತನ ನಿರ್ಲಕ್ಷ್ಯವೇ ಮಹಿಳೆ ಬೀಳಲು ಕಾರಣವೆಂದು ಭಾವಿಸಲಾಗಿತ್ತು. ಅಷ್ಟೇ ಅಲ್ಲದೆ ಅವನಿಗೆ ಭಾರತೀಯ ದಂಡ ಸಂಹಿತೆಯ 304 3 ತಿಂಗಳು ಜೈಲು ಶಿಕ್ಷೆಯನ್ನೂ ವಿಧಿಸಿತ್ತು.

ತನಗೆ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಬಸ್ ಚಾಲಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದನು. ಆತನ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಥಾಮಸ್ ಚಲಿಸುವ ವಾಹನದಿಂದ ಪ್ರಯಾಣಿಕ ಕೆಳಗುರುಳಿ ಬಿದ್ದ ಸಂದರ್ಭದಲ್ಲಿ ವಾಹನದ ಚಾಲಕ ಅದಕ್ಕೆ ಜವಾಬ್ದಾರನಾಗಲಾರ ಎಂದು ಹೇಳಿ ಚಾಲಕನ ಪರ ತೀರ್ಪು ನೀಡಿರು.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ