NEWSನಮ್ಮರಾಜ್ಯರಾಜಕೀಯ

ತೋರಿಕೆಯ ಮಾತು ಬಿಟ್ಟು ಸಾರಿಗೆ ಕಾರ್ಮಿಕರಿಗೆ ಬೆಲೆ ಏರಿಕೆಗೆ ಅನುಗುಣವಾಗಿಯಾದರೂ ವೇತನ ಹೆಚ್ಚಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ತೋರಿಕೆಯ ಮಾತುಗಳನ್ನು ಬಿಟ್ಟು ಸಾರಿಗೆ ಕಾರ್ಮಿಕರಿಗೆ ಉತ್ತಮ ರೀತಿಯಲ್ಲಿ, ಅಂದರೆ ಬೆಲೆ ಏರಿಕೆಗೆ ಅನುಗುಣವಾಗಿಯಾದರೂ ವೇತನವನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಸಿಐಟಿಯು ಆಗ್ರಹಿಸಿದೆ.

ಸಾರಿಗೆ ಸಚಿವ ಶ್ರೀರಾಮುಲು ಅವರು ಸಚಿವರಾದ ಮೊದಲ ದಿನದಿಂದಲೂ ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳನ್ನು ಅನುದಾನದ ಲಭ್ಯತೆ ಮೇಲೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುತ್ತೇವೆ ಎಂಬುದನ್ನೇ ಹೇಳುತ್ತಿದ್ದಾರೆ. ಆದರೆ ಅದರಿಂದ ಈವರೆಗೂಈ ಯಾವುದೇ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನು ಮುಖ್ಯ ಮಂತ್ರಿಗಳು ಡಿಸೆಂಬರ್- 2020 ಮತ್ತು ಏಪ್ರಿಲ್- 2021 ರಲ್ಲಿ ನಡೆದ ಸಾರಿಗೆ ಮುಷ್ಕರದ ವೇಳೆ ಗೃಹ ಸಚಿವರಾಗಿದ್ದವರು. ಅವರಿಗೆ ಎಲ್ಲವೂ ಗೊತ್ತಿದೆ. ಈ ರೀತಿಯ ನೂರಿ ಕುಸ್ತಿ ಮತ್ತು ತೋರಿಕೆಯ ಮಾತುಗಳನ್ನು ಬಿಟ್ಟು ಸಾರಿಗೆ ಕಾರ್ಮಿಕರಿಗೆ ಉತ್ತಮ ರೀತಿಯಲ್ಲಿ, ಅಂದರೆ ಬೆಲೆ ಏರಿಕೆಗೆ ಅನುಗುಣವಾಗಿಯಾದರೂ ವೇತನವನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಸಿಐಟಿಯು ಒತ್ತಾಯಿಸಿದೆ

ನೋಡಿ ಶಾಸಕರಿಗೆ ಇಟ್ಟಾರೆ ಶೇ. 50 ರಷ್ಷು ಹೆಚ್ಚಳ ಮಾಡಿಕೊಂಡಿದ್ದಾರೆ. ನಮಗೂ ನ್ಯಾಯಯುತವಾಗಿ ವೇತನ ಹೆಚ್ಚಳ ಮಾಡಲಿ ಎಂದು ಹಾಗೂ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲ ಕಾರ್ಮಿಕರನ್ನು ಪುನರ್ ನೇಮಕ ಮಾಡುವಂತೆ ಸಿಐಟಿಯು ಅಧ್ಯಕ್ಷ ಎಚ್‌.ಡಿ. ರೇವಪ್ಪ, ಉಪಾಧ್ಯಕ್ಷರಾದ ಡಾ. ಕೆ. ಪ್ರಕಾಶ್, ಚಂದ್ರಪ್ಪ ಮತ್ತು ಎಚ್‌.ಎಸ್‌. ಮಂಜುನಾಥ್ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ