NEWSನಮ್ಮಜಿಲ್ಲೆಶಿಕ್ಷಣ-

ಸಮಾಜಘಾತುಕ ಕೃತ್ಯಗಳ ತಡೆಯಲು ಮಾದಕ ವ್ಯಸನ ಜಾಗೃತಿ ಅಗತ್ಯ: PSI ರವಿಕುಮಾರ್

ವಿಜಯಪಥ ಸಮಗ್ರ ಸುದ್ದಿ

ನಾಗಮಂಗಲ:  ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವ್ಯಸನಗಳಿಗೆ ಹೆಚ್ಚು ದಾಸರಾಗುತ್ತಿದ್ದು, ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ . ಹಾಗಾಗಿ ಎಲ್ಲರೂ ಮಾದಕ ದ್ರವ್ಯಗಳಿಂದ ದೂರವಿರಿ ಎಂದು ನಾಗಮಂಗಲ ಗ್ರಾಮಾಂತರ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಶ್ರೀ ರವಿಕುಮಾರ್ ರವರು ಸಲಹೆ ನೀಡಿದರು.

ಇಂದು ನಾಗಮಂಗಲ ತಾಲೂಕು ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ , ದೇವಲಾಪುರ ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಯುವಕರು ಮಾದಕದ್ರವ್ಯಕ್ಕೆ ಬಲಿಯಾಗುತ್ತಿದ್ದು, ಸಕಾಲದಲ್ಲಿ ಅವರಿಗೆ ಅರಿವು ಮೂಡಿಸುವ ಮೂಲಕ ಅವುಗಳಿಂದ ಅವರನ್ನು ಮುಕ್ತಿಗೊಳಿಸಬೇಕಾದ ಅನಿವಾರ್ಯತೆ ಹೆಚ್ಚಿದೆ. ಮಾದಕ ದ್ರವ್ಯಗಳು ಹೆಚ್ಚು ದುಷ್ಪರಿಣಾಮಕಾರಿಯಾಗಿದ್ದು ಮಾನಸಿಕ ಮತ್ತು ದೈಹಿಕವಾಗಿ ವ್ಯಕ್ತಿಯನ್ನು ದುರ್ಬಲಗೊಳಿಸುತ್ತವೆ ಎಂದರು.

ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿದ್ದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿವೆ. ಯುವಕರನ್ನು ಸರಿ ದಾರಿಗೆ ತರುವಲ್ಲಿ ಶಾಲಾ ಕಾಲೇಜುಗಳು ಮತ್ತು ಸಮಾಜದ ಹಿರಿಯರು ನಿರಂತರ ಪ್ರಯತ್ನದಲ್ಲಿದ್ದರೂ ಫಲಕಾರಿಯಾಗದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೌಢಶಾಲಾ ಮುಖ್ಯಸ್ಥರಾದ ಶಿವಕುಮಾರ್ ಎನ್.ಸಿ. ಮಾತನಾಡಿ, ವಿದ್ಯಾರ್ಥಿಗಳು ತಾವು ಜಾಗೃತರಾಗುವುದರೊಂದಿಗೆ ತಮ್ಮ ಪರಿಸರದವರಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಇಂತಹ ಕಾರ್ಯಕ್ರಮಗಳು ಅರ್ಥಪೂರ್ಣ ಎನಿಸುತ್ತವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಮನೆ ಹಾಗೂ ಸುತ್ತಮುತ್ತಲಲ್ಲಿ ಮಾದಕ ದ್ರವ್ಯಗಳನ್ನು ಬಳಸದಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ನಂಜಮ್ಮಣ್ಣಿ ವಹಿಸಿದ್ದರು. ಭೂಮಿಕ ಮತ್ತು ಸಿಂಚನ ನಿರೂಪಿಸಿದರೆ, ಹರ್ಷಿತ & ಮೋಹನಕುಮಾರಿ ಪ್ರಾರ್ಥಿಸಿದರು. ಹರ್ಷಿತ ಡಿ.ಎಚ್. ಸ್ವಾಗತಿಸಿ ಚೈತ್ರ ವಂದಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಗಿರೀಶ್, ನೂರ್ ಅಫ್ರೋಜ್, ನಾಗೇಂದ್ರ, ಇಂದ್ರೇಶ್, ನವೀನ್, ಶ್ಯಾಮಲಾ, ಸಮ್ಯ, ಕಾಂತರಾಜು, ಯೋಗೇಶ್ ಉಪಸ್ಥಿತರಿದ್ದರು. ಗ್ರಾಮದಲ್ಲಿ ಜಾಥಾ ನಡೆಸಿ ಪ್ರಮುಖ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

Leave a Reply

error: Content is protected !!
LATEST
ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡು: ಗುಡ್ಡಕುಸಿತ, ಬಸ್‌ ನಿಲ್ದಾಣ, ದೇವಾಲಯಗಳು ಜಲಾವೃತ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸಾರಿಗೆ ನೌಕರರಿಗೆ ನಿರಾಸೆ KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ...