CrimeNEWSಸಿನಿಪಥ

ಮತ್ತೆ ಟಾಲಿವುಡ್ ನಲ್ಲಿ ಡ್ರಗ್ಸ್ ಸೌಂಡ್‌: ಖ್ಯಾತ ನಟಿ ನೇಹಾ ದೇಶಪಾಂಡೆ ಪತಿ ಬಂಧನ – ಆತಂಕದಲ್ಲಿ ಸೆಲೆಬ್ರಿಟಿಗಳು

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್: ಟಾಲಿವುಡ್ ನಲ್ಲಿ ಡ್ರಗ್ಸ್ ಪ್ರಕರಣ ಮತ್ತೆ ಆತಂಕ ಸೃಷ್ಟಿಸಿದೆ. ನಟಿ ಚಾರ್ಮಿ, ಪುರಿ ಜಗನ್ನಾಥ್, ಮುಮೈತ್ ಖಾನ್ ಸೇರಿದಂತೆ ಹಲವರು ಈಗಾಗಲೇ ಡ್ರಗ್ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಹಲವು ಬಾರಿ ವಿಚಾರಣೆಯನ್ನೂ ಎದುರಿಸಿದ್ದಾರೆ. ಈ ಪ್ರಕರಣ ಮಾಸುವ ಮುನ್ನವೇ ಟಾಲಿವುಡ್ ನಲ್ಲಿ ಡ್ರಗ್ಸ್ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ. ನಿನ್ನೆಯಷ್ಟೇ ಖ್ಯಾತ ನಟಿಯ ಪತಿಯನ್ನು ಹೈದರಾಬಾದ್‌ನ ಮಾದಕ ದ್ರವ್ಯ ನಿಗ್ರಹ ದಳ ಬಂಧಿಸಿದೆ.

ಬಾಲಿವುಡ್ ಮತ್ತು ತೆಲುಗಿನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ನೇಹಾ ದೇಶಪಾಂಡೆ ಅವರ ಪತಿ ಮಿರಾನ್ ಮೋಹಿತ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನೇಹಾ ಪತಿ ಮಾತ್ರವಲ್ಲದೆ ಖ್ಯಾತ ಉದ್ಯಮಿ ಕಿಶೋರ್ ರೆಡ್ಡಿ ಅವರನ್ನೂ ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಆತನ ಬಳಿ ಮೂರು ಗ್ರಾಂ ಕೊಕೇನ್ ಪತ್ತೆಯಾಗಿದೆ.

ನೇಹಾ ದೇಶಪಾಂಡೆ ಅವರ ಪತಿ ಮಿರಾನ್ ಹಲವಾರು ಡ್ರಗ್ ಮಾಫಿಯಾದವರೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ವಿಶ್ವಪ್ರಸಿದ್ಧ ಡ್ರಗ್ ದೊರೆ ಪ್ಯಾಬ್ಲೋ ಎಸ್ಕೋಬಾರ್‌ನ ಅತಿ ಹೆಚ್ಚು ಪ್ರೀತಿಸುವ ವ್ಯಕ್ತಿಗಳಲ್ಲಿ ಮಿರಾನ್ ಕೂಡ ಒಬ್ಬರು ಎಂದು ಹೇಳಲಾಗುತ್ತಿದೆ. ಈ ಅಭಿಮಾನದಿಂದ ತನ್ನ ನಾಯಿಗೆ ಪಾಬ್ಲೊ ಎಂದು ಹೆಸರಿಟ್ಟಿದ್ದಾರಂತೆ. ಇನ್ನು ಇವರು ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವೆಡೆ ಡಿಜೆ ನೈಟ್ ಪಾರ್ಟಿಗಳನ್ನೂ ಏರ್ಪಡಿಸಿದ್ದರಂತೆ.

ಮೀರಾನ್ ಬಂಧನದಿಂದ ತೆಲುಗು ಚಿತ್ರರಂಗದಲ್ಲಿ ಮತ್ತೆ ನಡುಕ ಶುರುವಾಗಿದೆ. ಮಿರಾನ್ ಯಾರ ಹೆಸರನ್ನು ಹೇಳುತ್ತಾನೆ ಎಂಬ ಕುತೂಹಲ ಇದೆ. ಡ್ರಗ್ಸ್ ಪ್ರಕರಣಗಳಲ್ಲಿ ಈಗಾಗಲೇ ಚಿತ್ರರಂಗದ ಹಲವು ಗಣ್ಯರು ಬಂಧನಕ್ಕೆ ಒಳಗಾಗಿದ್ದಾರೆ. ಹಲವರು ಆರೋಪಿಗಳೂ ಆಗಿದ್ದಾರೆ. ಇನ್ನು ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಮಿರಾನ್ ಬಂಧನವೂ ತೀವ್ರ ಆತಂಕಕ್ಕೆ ಕಾರಣವಾಗಿದೆ.  [wp-rss-aggregator limit=”2″]

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ