NEWSನಮ್ಮಜಿಲ್ಲೆನಮ್ಮರಾಜ್ಯ

ದಸರಾ ಕವಿಗೋಷ್ಠಿ : ಬ್ಯಾರಿ ಭಾಷೆ ನಿರಾಕರಣೆಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಆಕ್ರೊಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯನುಡಿ. ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು. ಸರ್ಕಾರದ್ದು ಏಕಪಕ್ಷೀಯ ನಡೆ ಎಂದು ಕಿಡಿಕಾರಿದ್ದಾರೆ.

ಈ ವರ್ಷದ ದಸರಾ ಕವಿಗೋಷ್ಠಿಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ರಾಜ್ಯ
ಸರ್ಕಾರದ ಸಂಕುಚಿತ ಮನೋಭಾವಕ್ಕೆ ಸಾಕ್ಷಿಯಾಗಿದೆ.

ಏಕಭಾಷೆಯನ್ನು ಮೆರೆಸುವ ಬಿಜೆಪಿ ಪಕ್ಷಕ್ಕೆ ಈ ನೆಲದ ತಾಯಿಭಾಷೆ ಕನ್ನಡವೂ ಸೇರಿ ಇತರೆ ಎಲ್ಲಾ ಉಪಭಾಷೆಗಳನ್ನು ಅಳಿಸಿಹಾಕಬೇಕೆಂಬ ಕೆಟ್ಟ ಮನಃಸ್ಥಿತಿ ಇರುವಂತಿದೆ. ಇದು ಖಂಡಿತಾ ನಡೆಯುವುದಿಲ್ಲ. ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ʼಬ್ಯಾರಿ ಸಾಹಿತ್ಯ ಅಕಾಡೆಮಿʼ ಸ್ಥಾಪನೆಗೆ ಅನುಮೋದನೆ ನೀಡಿದ್ದೆ‌ ಎಂದು ವಿವರಿಸಿದ್ದಾರೆ.

ಬ್ಯಾರಿ ಅಕಾಡೆಮಿಯ ಮೂಲಕ ಅತ್ಯುತ್ತಮ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನೂ ಸ್ಥಾಪಿಸಲಾಗಿದೆ. ವಿಶೇಷವೆಂದರೆ, ಬ್ಯಾರಿ ಭಾಷಿಗರು ಕನ್ನಡ ಲಿಪಿಯನ್ನೇ ಬಳಸಿ ಅತ್ಯುತ್ತಮ ಕೃತಿಗಳನ್ನು ರಚಿಸಿದ್ದು, ಅವುಗಳಲ್ಲಿ ಕೆಲ ಕೃತಿಗಳು ಕನ್ನಡಕ್ಕೂ ಅನುವಾದಿಸಲ್ಪಟ್ಟಿವೆ.

ವಚನ ಸಾಹಿತ್ಯ ಸೇರಿ ಅನೇಕ ಕನ್ನಡದ ಅಮೂಲ್ಯ ಕೃತಿಗಳು ಬ್ಯಾರಿಗೂ ಅನುವಾದಗೊಂಡಿವೆ. ಕನ್ನಡ ನೆಲದಲ್ಲಿ ಕನ್ನಡ ಲಿಪಿಯೊಂದಿಗೆ ಸಾಮರಸ್ಯದ ಭಾಷೆಯಾಗಿ ಬೆರೆತಿರುವ ಬ್ಯಾರಿ ಭಾಷೆಗೆ ಈ ವರ್ಷ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದರು.

Leave a Reply

error: Content is protected !!
LATEST
KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”