NEWSಕೃಷಿನಮ್ಮಜಿಲ್ಲೆ

ಮೈಸೂರು: ಬೆಳ್ಳಂಬೆಳಗ್ಗೆ ರೈತ ಮುಖಂಡರ ಬಂಧನ: ಪೊಲೀಸರ ಕಾನೂನು ಬಾಹಿರ ಚಟುವಟಿಕೆ ಖಂಡಿಸಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬ್ಬಿನ ದರ ನಿಗದಿ ಮತ್ತು ರೈತರ ಸಮಸ್ಯೆ ನಿವಾರಿಸಲು ಆಗ್ರಹಿಸಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರನ್ನು ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲಾ ಗ್ರಾಮಾಂತರ ಪೊಲೀಸರು ಕಾನೂನು ಬಾಹಿರವಾಗಿ ಬಂಧಿಸಿರುವುದನ್ನು ಖಂಡಿಸಿ ಮೈಸೂರಿನ ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಮೈಸೂರು – ಚಾಮರಾಜನಗರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇಂದು (ಶುಕ್ರವಾರ) ಬೆಳಗಿನ ಜಾವ ರೈತ ಮುಖಂಡರ ಬಂಧನ ಮಾಡಿ ಠಾಣೆಯಲ್ಲಿರಿಸಿಕೊಂಡಿದ್ದಾರೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಇಂದು 11.30ಕ್ಕೆ ಮೈಸೂರಿನ ನ್ಯಾಯಾಲಯದ ಮುಂಭಾಗ ಧರಣಿ ನಡೆಸಲಾಗುತ್ತಿದೆ. ಅಲ್ಲದೆ ರೈತರ ಬಂಧನ ಖಂಡಿಸಿ ಚಾಮರಾಜನಗರದ ಹುಡಿಗಾಲದಲ್ಲಿ ಈಗಾಗಲೇ ರೈತರು ರಸ್ತೆ ತಡೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರೈತರ ಮುಖಂಡರ ಬಂಧನ ಖಂಡಿಸಿ ಕೂಡಲೇ ಬಿಡುಗಡೆ ಮಾಡುವಂತೆ ಬನ್ನೂರು ಪೊಲೀಸ್ ಠಾಣೆಯ ಮುಂದೆ ನೂರಾರು ರೈತರು ಜಮಾಯಿಸಿದ್ದು, ರಸ್ತೆ ತಡೆ ಚಳವಳಿ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲಾ ಗ್ರಾಮಾಂತರ ಪೊಲೀಸರು ರೈತ ಮುಖಂಡರ ಬಂಧನವನ್ನು ಕಾನೂನು ಬಾಹಿರವಾಗಿ ಮಾಡಿದ್ದಾರೆ ಎಂದು ಪ್ರತಿಭಟನಾ ನಿರತರು ಕಿಡಿಕಾರಿದ್ದಾರೆ.

ಎಲ್ಲೆಲ್ಲಿ ಬಂಧನ: ಕಬ್ಬಿನ ದರ ನಿಗದಿ ಮತ್ತು ರೈತರ ಸಮಸ್ಯೆ ನಿವಾರಿಸಲು ಆಗ್ರಹಿಸಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರನ್ನು ಬೆಳಗ್ಗೆ ಮೂರು ಗಂಟೆಯಿಂದಲೇ ಮೈಸೂರು ಜಿಲ್ಲೆಯ ಜೈಯಪುರ ಪೊಲೀಸ್ ಠಾಣೆಯವರು ಬರಡನಪುರ ನಾಗರಾಜ್ ಅವರನ್ನು ಬಂಧಿಸಿದ್ದಾರೆ.

ಬನ್ನೂರು ಪೊಲೀಸ್ ಠಾಣೆಯವರು ಅತ್ತಹಳ್ಳಿ ದೇವರಾಜ್ ಅವರನ್ನು, ತಿ.ನರಸೀಪುರ ಪೊಲೀಸ್ ಠಾಣೆಯವರು ಕಿರುಗಸುರ ಶಂಕರ್, ಕುರುಬೂರು ಸಿದ್ದೇಶ್, ಪ್ರಸಾದ್, ನಾಯ್ಕ್, ಅಪ್ಪಣ್ಣ, ನಿಂಗರಾಜ್ ಅವರನ್ನು ಅಕ್ರಮವಾಗಿ ಬಂಧಿಸಿದ್ದಾರೆ.

ಇನ್ನು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯವರು ಹಾಲಿನ ನಾಗರಾಜ್ ಅವರನ್ನು ಬಂಧಿಸಿದ್ದು, ಹೀಗೆ ಆಯಾಐ ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮ ಎಂದು ಮಧ್ಯರಾತ್ರಿ ಮೂರು ಗಂಟೆಯಿಂದಲೇ ರೈತ ಮುಖಂಡರ ಬಂಧನ ಮಾಡಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ.

ಸರ್ಕಾರ ರೈತರ ಚಳವಳಿ ಹತ್ತಿಕಲು ರೈತರ ಚಳವಳಿ ದಮನ ಮಾಡಲು ಪೊಲೀಸ್ ಇಲಾಖೆ ಮೂಲಕ ಯತ್ನಿಸುತ್ತಿದೆ. ಯಾತಕ್ಕಾಗಿ ಬಂಧನ ಎಂದು ಪ್ರಶ್ನೆ ಮಾಡಿದರೆ ಸ್ಥಳೀಯ ಪೊಲೀಸರು ಸಮರ್ಪಕ ಉತ್ತರ ನೀಡುತ್ತಿಲ್ಲ. ಇದು ದಬ್ಬಾಳಿಕೆಯ ವರ್ತನೆ. ಕೂಡಲೇ ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಸ್ತೆ ಕಡೆ ಚಳವಳಿಗೆ ಹಳ್ಳಿ ಹಳ್ಳಿಗಳಲ್ಲೂ ಕರೆ ನೀಡಬೇಕಾಗುತ್ತದೆ ಎಂದು ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ್ ಎಚ್ಚರಿಸಿದ್ದಾರೆ.

ಇಂದು ಬೆಳಗಿನ ಜಾವ 3 40 ಕ್ಕೆ ಬನ್ನೂರು ಪೊಲೀಸರು ನಮ್ಮ ಮನೆಗೆ ಬಂದು ನನ್ನುನು ವಶಕ್ಕೆ ಪಡೆದು ಬನ್ನೂರು ಆರಕ್ಷಕ ಠಾಣೆಗೆ ಕರೆದೊಯ್ದರು. ಕಾರಣ ಕೇಳಿದ್ದಕ್ಕೆ ಇಂದು ,ನಾಳೆ ಜಿಲ್ಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಇದೆ.  ನೀವು ಮತ್ತು ನಿಮ್ಮ ಸಂಘಟನೆಯವರು ಅವರ ಕಾರ್ಯ ಕ್ರಮಗಳಿಗೆ ಅಡ್ಡಿ ಪಡಿಸುವುದಾಗಿ ತಿಳಿದು ಬಂದಿದೆ.   ಮುಂಜಾಗ್ರತಾ ಕ್ರಮವಾಗಿ ನಿಮ್ಮನ್ನು ವಶಕ್ಕೆ ಪಡೆಯಲು ನಮ್ಮ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.  ನಿಮ್ಮನ್ನು  ಮೈಸೂರಿನ ಆರಕ್ಷಕ ಅಧೀಕ್ಷಕರ ಬಳಿ ಕರೆದೊಯ್ಯು ತ್ತೇವೆ ಎಂದು ಮೈಸೂರಿನ D A R ಗ್ರೌಂಡ್ ನಲ್ಲಿ ಇರಿಸಿದ್ದಾರೆ.

 l ಅತ್ತಹಳ್ಳಿ ದೇವರಾಜ್, ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು