CrimeNEWSದೇಶ-ವಿದೇಶ

ಟರ್ಕಿಯಲ್ಲಿ ಭೂಕಂಪ – ಸಾವಿನ ಸಂಖ್ಯೆ 4000ಕ್ಕೇರಿಕೆ : ಇಂದು ಮತ್ತೆ ಕಂಪಿಸಿದ ಭೂಮಿ

ವಿಜಯಪಥ ಸಮಗ್ರ ಸುದ್ದಿ

ಇಸ್ತಾಂಬುಲ್: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭಣವಿಸಿದ ಮೂರು ಪ್ರಬಲ ಭೂಕಂಪಗಳಿಂದ ಅಪಾರ ಪ್ರಮಾಣದ ಸಾವು-ನೋವುಗಳು ಉಂಡಾಗಿದ್ದು ಮತ್ತೆ ಇಂದು (ಮಂಗಳವಾರ) ಕೂಡ ಮಧ್ಯ ಟರ್ಕಿ ಪ್ರದೇಶದಲ್ಲಿ 5.6 ತೀವ್ರತೆಯ ಭೂಕಂಪನವಾಗಿದ್ದು, ಒಟ್ಟಾರೆ ಈವರೆಗೆ ಸಾವಿನ ಸಂಖ್ಯೆ 4000ಕ್ಕೇರಿದೆ.

ಈ ಭೂಕಂನದಿಂದ ಸಾವಿರಾರು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈತ್ತ ಗಾಯಗೊಂಡವರಿಗೆ ಚಿಕತ್ಸೆ ನೀಡಲು ವೈದ್ಯರು ಮತ್ತು ವೈದ್ಯಸಿಬ್ಬಂದಿ ಪರದಾಡುತ್ತಿದ್ದಾರೆ. ಅವಶೇಷಗಳಡಿ ಬದುಕುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಭಾರತ ಸೇರಿದಂತೆ ಅನೇಕ ದೇಶಗಳು ಅಗತ್ಯ ವಸ್ತುಗಳ ಸರಬರಾಜು ಮತ್ತು ಪರಿಹಾರ ತಂಡಗಳನ್ನು ಕಳುಹಿಸುತ್ತಿವೆ.

ರಕ್ಷಣಾ ತಂಡಗಳು ಅವಶೇಷಗಳಡಿ ಶೋಧ ನಡೆಸುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿವೆ. ಮೊದಲ ಭೂಕಂಪದ ಕೇಂದ್ರಬಿಂದು ಸಿರಿಯಾ ಗಡಿಯ ಗಾಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ಬಳಿ ಇತ್ತು ಎಂದು ತಿಳಿದುಬಂದಿದೆ.

ಇತರ ಎರಡು ಭೂಕಂಪಗಳು ಹತ್ತಿರದ ಕಹ್ರಮನ್ಮರಸ್ ಪ್ರಾಂತ್ಯದಲ್ಲಿ ಸಂಭವಿಸಿವೆ. ಟರ್ಕಿಯ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ, ಈ ಸಮಯದಲ್ಲಿ ಟರ್ಕಿಯ ಧ್ವಜಗಳು ರಾಷ್ಟ್ರದಾದ್ಯಂತ ಮತ್ತು ಸಾಗರೋತ್ತರ ರಾಜತಾಂತ್ರಿಕ ಕಾರ್ಯಾಚರಣೆಗಳಲ್ಲಿ ಅರ್ಧದಲ್ಲಿ ಹಾರಾಡಲಿವೆ.

Editordev
the authorEditordev

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...